Wednesday, August 10, 2022

Latest Posts

ಮಹಿಳಾ ಅಭ್ಯರ್ಥಿ ಸೀರೆ ಎಳೆದಾಡಿದ ರಾಜಕೀಯ ವೈರಿಗಳು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಉತ್ತರ ಪ್ರದೇಶದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ನಾಮಪತ್ರ ಸಲ್ಲಿಸಲು ಬಂದಿದ್ದ ಮಹಿಳಾ ಅಭ್ಯರ್ಥಿಯ ಸೀರೆ ಎಳೆದಾಡಲಾಗಿದೆ.
ಬ್ಲಾಕ್ ಪಂಚಾಯಿತಿ ಚುನಾವಣೆಗಾಗಿ ನಾಮಪತ್ರ ಸಲ್ಲಿಸಲು ಬಂದಿದ್ದ ಸಮಾಜವಾದಿ ಪಕ್ಷದ ಮಹಿಳಾ ಅಭ್ಯರ್ಥಿಯ ಸೀರೆಯನ್ನು ರಾಜಕೀಯ ವೈರಿಗಳು ಎಳೆದಾಡಿದ್ದು, ವಿಡಿಯೋ ವೈರಲ್ ಆಗಿದೆ.
ಲಖನೌದಿಂದ 103 ಕಿ.ಮೀ. ದೂರದಲ್ಲಿರುವ ಲಖಿಂಪುರ ಖೇರಿಯಲ್ಲಿ ಈ ಘಟನೆ ನಡೆದಿದೆ.
ಈ ವಿಡಿಯೋವನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಸಿಎಂ ಯೋಗಿ ಆದಿತ್ಯನಾಥ್ ಅವರ ಗೂಂಡಾಗಳು ಮಹಿಳೆಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss