Wednesday, October 5, 2022

Latest Posts

ಕೃಷ್ಣಂರಾಜು ನಿಧನ: ವೆಂಕಯ್ಯನಾಯ್ಡು ಸೇರಿದಂತೆ ರಾಜಕೀಯ ಗಣ್ಯರ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅನಾರೋಗ್ಯದಿಂದ ಬಳಲುತ್ತಿದ್ದ ಟಾಲಿವುಡ್‌ ರೆಬಲ್‌ ಸ್ಟಾರ್‌ ಕೃಷ್ಣಂರಾಜು ಇಂದು ನಿಧನರಾಗಿದ್ದು ಸಿನಿರಂಗ ಅಷ್ಟೇ ಅಲ್ಲದೆ ರಾಜಕೀಯ ವಲಯದಲ್ಲಿಯೂ ಶೋಕ ಮಡುಗಟ್ಟಿದೆ. ಇವರ ನಿಧನಕ್ಕೆ ಮಾಜಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಸೇರಿದಂತೆ ಸಿಎಂ ಕೆಸಿಆರ್‌, ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತೆಲಂಗಾಣ ಸಚಿವ ಕೆಟಿಆರ್, ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ರಾಜ್ಯಪಾಲ ವಿದ್ಯಾಸಾಗರ ರಾವ್ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

ಜನಪ್ರಿಯ ನಟ ಹಾಗೂ ಕೇಂದ್ರದ ಮಾಜಿ ಸಚಿವ ಕೃಷ್ಣಂ ರಾಜು ಅವರ ನಿಧನಕ್ಕೆ ತೆಲಂಗಾಣ ಸಿಎಂ ಕೆಸಿಆರ್ ಸಂತಾಪ ಸೂಚಿಸಿದ್ದಾರೆ. ತಮ್ಮ 50 ವರ್ಷಗಳ ಸಿನಿಜೀವನದಲ್ಲಿ ಕೃಷ್ಣಂರಾಜು ಅವರು ಹಲವು ಚಿತ್ರಗಳಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿ ತಮ್ಮ ವಿಶಿಷ್ಟ ನಟನೆಯಿಂದ ರೆಬೆಲ್ ಸ್ಟಾರ್ ಎಂದೇ ಖ್ಯಾತಿ ಗಳಿಸಿದ್ದನ್ನು ಸ್ಮರಿಸಿದರು. ಅವರ ನಿಧನ ತೆಲುಗು ಚಿತ್ರರಂಗಕ್ಕೆ ದೊಡ್ಡ ನಷ್ಟ ಎಂದು ಕೆಸಿಆರ್ ಹೇಳಿದರು.

ಮಾಜಿ ಕೇಂದ್ರ ಸಚಿವ ಹಾಗೂ ಖ್ಯಾತ ಚಿತ್ರನಟ ಶ್ರೀ ಉಪ್ಪಲಪಾಟಿ ವೆಂಕಟ ಕೃಷ್ಣಮರಾಜು ಅವರು ನಿಧನರಾಗಿದ್ದು ಅತೀವ ದುಃಖ ತಂದಿದೆ. ಒಳ್ಳೆಯತನಕ್ಕೆ ಹೆಸರಾಗಿದ್ದ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತಾ ಅವರ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳಿಗೆ ನನ್ನ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಟ್ವೀಟ್‌ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!