Thursday, June 1, 2023

Latest Posts

PHOTO GALLERY | ದೇವರ ಮೊರೆ ಹೋದ ರಾಜಕೀಯ ನಾಯಕರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ನೇನು ಕೆಲವೇ ಗಂಟೆಗಳಲ್ಲಿ ಚುನಾವಣಾ ಫಲಿತಾಂಶ ಹೊರಬೀಳಲಿದೆ, ಯಾವುದೇ ಗೆಲುವಿಗಾಗಿ ದೇವರನ್ನು ಪ್ರಾರ್ಥಿಸುವುದು ವಾಡಿಕೆಯಾಗಿದ್ದು, ರಾಜ್ಯದ ರಾಜಕೀಯ ನಾಯಕರು ಉತ್ತಮ ಫಲಿತಾಂಶಕ್ಕಾಗಿ ದೇವರ ಮೊರೆ ಹೋಗಿದ್ದಾರೆ.

ಹುಬ್ಬಳ್ಳಿಯ ಆಂಜನೇಯ ದೇಗುಲಕ್ಕೆ ಸಿಎಂ ಬೊಮ್ಮಾಯಿ ಭೇಟಿ

ಹುಬ್ಬಳ್ಳಿಯ ವಿಜಯನಗರದಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನ ಬಸವೇಶ್ವರ ದೇಗುಲದಲ್ಲಿ ಎಚ್‌ಡಿಕೆ ಪೂಜೆ

ಬೆಂಗಳೂರಿನ ಎಚ್ಎಸ್ಆರ್ ಲೇಔಟ್​ನ ಬಸವೇಶ್ವರ ದೇವಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ವಿಶೇಷ ಪೂಜೆ ಸಲ್ಲಸಿ
ಅಭಿಷೇಕ ಮಾಡಿಸಿದ್ದಾರೆ. ಈ ವೇಳೆ ಹೆಚ್​ಡಿಕೆಗೆ ಈಶ್ವರ ಲಿಂಗದ ಮೇಲಿನಿಂದ ಹೂವಿನ‌ ಪ್ರಸಾದವಾಗಿದೆ.ಬೆಳಗಾವಿಯ ಹಿಂಡಲಗಾ ಗಣಪತಿ ದೇವಸ್ಥಾನಕ್ಕೆ ತೆರಳಿದ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅವರಿಗೆ ಸಹೋದರರು ಸಾಥ್​ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!