ಕಾಂಗ್ರೆಸ್ ಹೋರಾಟ ರಾಜಕೀಯ ಪ್ರೇರಿತ: ಸಚಿವ ಬಸವರಾಜ ಭೈರತಿ

ಹೊಸದಿಗಂತ ವರದಿ,ದಾವಣಗೆರೆ:

ಮೇಕೆದಾಟು ಯೋಜನೆ ಜಾರಿಗೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದ್ದು, ಕಾಂಗ್ರೆಸ್ ಹೋರಾಟ ರಾಜಕೀಯ ಪ್ರೇರಿತವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಭೈರತಿ ಟೀಕಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಸಂಬಂಧ ಹಸಿರು ನ್ಯಾಯಮಂಡಳಿ ನೀಡಿರುವ ತಡೆಯಾe ತೆರವುಗೊಳಿಸುವ ಕೆಲಸ ನಾವು ಮಾಡಿದ್ದು, ಸುಪ್ರೀಂ ಕೋರ್ಟ್‌ಗೆ ಸಹ ಮೇಲ್ಮನವಿ ಹೋಗಿದ್ದೇವೆ. ವಾಸ್ತವ ಸ್ಥಿತಿ ಹೀಗಿರುವಾಗ ಕಾಂಗ್ರೆಸ್ ನಾಯಕರು ಪಾದಯಾತ್ರೆ ಕೈಗೊಂಡಿದ್ದರಲ್ಲಿ ಅರ್ಥವಿಲ್ಲ. ಕಾಂಗ್ರೆಸ್ಪಾ ದಯಾತ್ರೆಯಿಂದ ಏನಾದರೂ ಏರುಪೇರಾದರೆ ಅದರ ಸಂಪೂರ್ಣ ಹೊಣೆ ಆ ಪಕ್ಷದ ನಾಯಕರೇ ಹೊರಬೇಕಾಗುತ್ತದೆ ಎಂದರು.
ನಮ್ಮ ಸರ್ಕಾರ ಮೇಕೆದಾಟು ಯೋಜನೆ ಬಗ್ಗೆ ಆಶಾಭಾವನೆ ಇಟ್ಟುಕೊಂಡಿದೆ. ಇದೇ ಕಾರಣಕ್ಕೆ ನಾವೂ ಕಾನೂನು ಹೋರಾಟ ನಡೆಸಿದ್ದೇವೆ. ಕಾಂಗ್ರೆಸ್ ಸರ್ಕಾರವು ಭೌತಿಕ ವರದಿ ತಯಾರಿಸುವಲ್ಲೇ 5 ವರ್ಷ ಕಳೆದಿತ್ತು. ಬಳಿಕ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರ ಬಂದಾಗ ಡಿಪಿಆರ್ ತಯಾರಿಸಿ, ಕೇಂದ್ರಕ್ಕೆ ಸಲ್ಲಿಸಿದ ತಕ್ಷಣ ರೈತ ಮುಖಂಡರು ಮೇಕೆದಾಟು ಪರಿಶೀಲಿಸುವ ಸಲುವಾಗಿ ತೆರಳಿದ್ದಾಗ ತಮಿಳುನಾಡಿನವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು ಎಂದು ಅವರು ತಿಳಿಸಿದರು.
ದಿನದಿನಕ್ಕೂ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. ಕಾಂಗ್ರೆಸ್ಸಿನ ನಾಯಕರು ಇದನ್ನೆಲ್ಲಾ ಮನಗಾಣಬೇಕು. ಪಾದಯಾತ್ರೆ ನಡೆಸಿರುವ ಕಾಂಗ್ರೆಸ್ನಾ ಯಕರಿಗೆ ಹೈಕೋರ್ಟ್ ಛೀಮಾರಿ ಹಾಕಿದೆ. ಪಾದಯಾತ್ರೆ ನಿಲ್ಲಿಸಬೇಕಾದ್ದು ಕಾಂಗ್ರೆಸ್ನಾ ಯಕರ ಕರ್ತವ್ಯ ಎಂದರಲ್ಲದೆ, ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕೋವಿಡ್ ನಿಯಮ ಉಲ್ಲಂಘಿಸಿದ ಬಗ್ಗೆ ಶಾಸಕರ ಜೊತೆಗೆ ಮಾತನಾಡುವೆ. ಬಲಮುರಿಯಲ್ಲಿ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಿದ್ದವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!