ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ಹೀಗಾಗಿ ಪ್ರಶ್ನಿಸಲು ಬಿಜೆಪಿಗೆ ಯಾವುದೇ ನೈತಿಕತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಜನಾಂದೋಲನದ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ದೂರಿದರು. ವಿಕಸಿತ ಭಾರತ ಜಿ ರಾಮ್ ಜಿ ಕಾಯ್ದೆ ಕುರಿತು ಚರ್ಚಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಅವರು ತಿಳಿಸಿದರು.
ಇದೇ ವೇಳೆ ಲೋಕಾಯುಕ್ತ ದಾಳಿ ಕುರಿತಂತೆ ಕಾನೂನು ಕ್ರಮಕ್ಕೆ ಸರ್ಕಾರ ಅಡ್ಡಿಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಏರ್ಪಡಿಸಿರುವ ಕೃಷಿ ವಿಚಾರ ಸಂಕಿರಣವನ್ನು ಉದ್ಘಾಟಿಸಿದರು.


