ಬಜೆಟ್‌ಗೂ ಮುನ್ನ ರಾಜಕೀಯದಲ್ಲಿ ಕೋಲಾಹಲ: ಮೈತ್ರಿ ನಾಯಕರಿಂದ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

2025-26ನೇ ಸಾಲಿನ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಲಿದ್ದಾರೆ. ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಬಜೆಟ್‌ಗೂ ಮುನ್ನ ಬಿಜೆಪಿ, ಜೆಡಿಎಸ್ ಪ್ರತಿಭಟನೆ ನಡೆಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಳಗ್ಗೆ 9:30 ಕ್ಕೆ ವಿಧಾನಸೌಧ ಗಾಂಧಿ ಪ್ರತಿಮೆ‌ ಎದುರು ಮೈತ್ರಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಶಾಸಕರ ಕ್ಷೇತ್ರಗಳಿಗೆ ತಲಾ 150 ಕೋಟಿ ಅನುದಾನ ಕೊಡಬೇಕು ಎಂದು ಸರ್ಕಾರಕ್ಕೆ ಈ ಮೂಲಕ ಆಗ್ರಹಿಸಿದ್ದಾರೆ.

ಗಾಂಧಿ ಪ್ರತಿಮೆಯಿಂದ ಕೆಂಗಲ್ ಗೇಟ್ ವರೆಗೆ ಪ್ರತಿಭಟನಾ ಮೆರಣಿಗೆ ನಡೆಸಲು ಮೈತ್ರಿ ನಾಯಕರು ಯೋಜಿಸಿದ್ದಾರೆ ಎನ್ನಲಾಗಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!