ಎಲ್ಲಾ ವಿಷಯದಲ್ಲೂ ರಾಜಕೀಯ: ಸಿದ್ದರಾಮಯ್ಯ ಹೇಳಿಕೆಗೆ ಕಟೀಲು ಗರಂ

ದಿಗಂತ ವರದಿ ಮಂಗಳೂರು:

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವಲ್ಲಿ ಸರಕಾರ ಬೇಜವಾಬ್ದಾರಿ ತೋರಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ದೇಶಕ್ಕೆ ಮಾಡಿದ ಅವಮಾನ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ವಿಚಾರದಲ್ಲಿ ಸಿದ್ದರಾಮಯ್ಯ ಅವರೇ ಬೇಜವಾಬ್ದಾರಿ ವರ್ತನೆ ತೋರಿದ್ದಾರೆ. ಉಕ್ರೇನ್‌ನಲ್ಲಿರುವ ಭಾರತೀಯರನ್ನು ಕರೆತರಲು ಪ್ರಧಾನಿ ನರೇಂದ್ರ ಮೋದಿ ಅವರೇ ನೇತೃತ್ವ ವಹಿಸಿದ್ದು, ನಾಲ್ವರು ಸಚಿವರನ್ನು ಈ ಕಾರ್ಯಕ್ಕೆ ನಿಯೋಜಿಸಿದ್ದಾರೆ. ಆದರೆ, ಸಿದ್ದರಾಮಯ್ಯ ಅವರು ಈ ವಿಷಯದಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಪ್ರತಿಪಕ್ಷ ನಾಯಕನಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರು ಹಿರಿತನ ಹೊಂದಿದ್ದಾರೆ. ವಿರೋಧ ಮಾಡುವುದೇ ವಿರೋಧ ಪಕ್ಷದ ನಾಯಕನ ಕೆಲಸ ಎಂಬಂತೆ ವರ್ತಿಸುತ್ತಿದ್ದಾರೆ. ಎಲ್ಲದಕ್ಕೂ ವಿರೋಧ ಮಾತನಾಡುತ್ತಿದ್ದಾರೆ. ಅವರ ಈ ವರ್ತನೆ ಸರಿಯಲ್ಲ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!