ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಪಿಸಿಸಿ ಅಧ್ಯಕ್ಷ ಗಾದಿಗೆ ನಾನೂ ಆಕಾಂಕ್ಷಿ ಎನ್ನುವ ಸಚಿವ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಅವರ ಹೆಸರು ಮುನ್ನೆಲೆಗೆ ಬಂದಿರುವ ಬಗ್ಗೆ ಪ್ರಶ್ನಿಸಿದಾಗ, ‘ಮಾಧ್ಯಮಗಳ ಮುಂದೆ ರಾಜಕೀಯ ಚರ್ಚೆ ಮಾಡುವುದು ಯಾವ ಪಕ್ಷದವರಿಗೂ ಹಾಗೂ ಯಾರಿಗೂ ಸೂಕ್ತವಾದುದಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಮಾಧ್ಯಮಗಳ ಮುಂದೆ ಮಾಡುವ ಚರ್ಚೆಯಿಂದ ರಾಜಕಾರಣ ನಡೆಯುವುದಿಲ್ಲ. ಇನ್ನು ಕಾಂಗ್ರೆಸ್ ಪಕ್ಷದ ಸಾಧನ ಸಮಾವೇಶವು ಸಿದ್ದರಾಮಯ್ಯ ಅವರ ಸಮಾವೇಶವಾಗಿ ಬದಲಾಗಿದೆ ಎನ್ನುವ ಕುರಿತು ಅಸಮಾಧಾನ ಹೊಂದಿರುವ ಪತ್ರವು ಎಐಸಿಸಿಗೆ ಬಂದಿದೆ ಎನ್ನುವ ಬಗ್ಗೆ ಕೇಳಿದಾಗ, ‘ನನಗೆ ಇದರ ಬಗ್ಗೆ ಮಾಹಿತಿಯಿಲ್ಲ. ಆದರೆ, ಸಮಾವೇಶವನ್ನು ಯಾವ ಕಾರಣಕ್ಕೆ ಮಾಡಲಾಗುತ್ತಿದೆ ಎನ್ನುವುದರ ಬಗ್ಗೆ ಮುಖ್ಯಮಂತ್ರಿಗಳು ನನಗೆ ಮೊದಲೇ ತಿಳಿಸಿದ್ದಾರೆ. ಮಿಕ್ಕ ವಿಚಾರಗಳು ನನಗೆ ಗೊತ್ತಿಲ್ಲ. ಏಕೆಂದರೆ ಮುಖ್ಯಮಂತ್ರಿಗಳು ಹಾಗೂ ನಾನು ಭೇಟಿ ಮಾಡಿ ಮೂರು ನಾಲ್ಕು ದಿನಗಳಾಗಿವೆ. ಪಕ್ಷದ ಭಾಗವಹಿಸುವಿಕೆ ಖಂಡಿತ ಇದ್ದೆ ಇರುತ್ತದೆ ಎಂದರು.