ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ: ಯಾವ ಕ್ಷೇತ್ರಗಳಲ್ಲಿ ಯಾವಾಗ ಚುನಾವಣೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

 

2024ರ ಲೋಕಸಭೆ ಚುನಾವಣೆಗೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು, ರಾಜ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಭಾರತೀಯ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಅವರು ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದರು.

ದೇಶಾದ್ಯಂತ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ಪ್ರಾರಂಭವಾಗುತ್ತದೆ ಮತ್ತು ಜೂನ್ 4 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು. ರಾಜ್ಯದಲ್ಲಿ ಮತದಾನವು ಎರಡು ಹಂತಗಳಲ್ಲಿ ನಡೆಯಲಿದ್ದು, ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಏಪ್ರಿಲ್‌ 26ರಂದು ಮತದಾನ ನಡೆಯುವ ಕ್ಷೇತ್ರಗಳು:

ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ.

ಮೇ 7ರಂದು ಮತದಾನ ನಡೆಯುವ ಕ್ಷೇತ್ರಗಳು:

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಕಲಬುರಗಿ, ರಾಯಚೂರು, ಬೀದರ್ ಕೊಪ್ಪಳ ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!