ರಾಜ್ಯಸಭೆ ಚುನಾವಣೆ| ಕರ್ನಾಟಕ ಸೇರಿದಂತೆ 16 ಸ್ಥಾನಗಳಿಗೆ ಇಂದು ಮತದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ಸೇರಿದಂತೆ ರಾಜ್ಯಸಭೆಯ 16 ಸ್ಥಾನಗಳಿಗೆ ಇಂದು (ಜೂನ್ 10) ಚುನಾವಣೆ ನಡೆಯುತ್ತಿದೆ. ಕರ್ನಾಟಕದಿಂದ ನಾಲ್ವರು ಅಭ್ಯರ್ಥಿಗಳ ಆಯ್ಕೆಗೆ ಮತದಾನ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಇಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಸಂಜೆ 6ಗಂಟೆವರೆಗೆ ಮತ ಎಣಿಕೆ ಪ್ರಕ್ರಿಯೆ ನಡೆದ ಬಳಿಕ ಫಲಿತಾಂಶ ಪ್ರಕಟವಾಗಲಿದೆ.

ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಶಾಸಕರ ಮತದಾನಕ್ಕೆ ಸಕಲ ಸಿದ್ಧತೆ ಮಾಡಲಾಗಿದ್ದು, ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. 224 ಸದಸ್ಯರು ಮತ ಚಲಾಯಿಸಲಿದ್ದಾರೆ.

ಬಿಜೆಪಿಯಿಂದ- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಲೆಹರ್ ಸಿಂಗ್

ಕಾಂಗ್ರೆಸ್-ಜೈರಾಮ್ ರಮೇಶ್, ಮನ್ಸೂರ್ ಆಲಿ ಖಾನ್

ಜೆಡಿಎಸ್- ಕುಪೇಂದ್ರ ರೆಡ್ಡಿ ಚುನಾವಣಾ ಕಣದಲ್ಲಿದ್ದಾರೆ.

ರಾಜ್ಯಸಭೆಗೆ ಆಯ್ಕೆಯಾಗಲು ಪ್ರತಿ ಅಭ್ಯರ್ಥಿಗೆ 45 ಮತಗಳ ಅಗತ್ಯವಿದೆ. ಬಿಜೆಪಿ-122, ಕಾಂಗ್ರೆಸ್-71, ಜೆಡಿಎಸ್- 32 ಮತಗಳನ್ನು ಒಳಗೊಂಡಿವೆ. ಈಗಾಗಲೇ ಆಂಧ್ರ ಪ್ರದೇಶ, ತೆಲಂಗಾಣ, ಮಧ್ಯಪ್ರದೇಶ, ಬಿಹಾರ, ಒಡಿಶಾ, ಉತ್ತರ ಪ್ರದೇಶ, ತಮಿಳುನಾಡು, ಪಂಜಾಬ್, ಛತ್ತೀಸ್ ಗಢ, ಉತ್ತರಾಖಂಡ, ಮತ್ತು ಜಾರ್ಖಂಡ್ ಗಳಲ್ಲಿ 41 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಹರಿಯಾಣ ಮತ್ತು ರಾಜಸ್ಥಾನಗಳಲ್ಲಿ 16 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!