ಕರ್ನಾಟಕದಲ್ಲಿ ಅವಧಿಗೆ ಮುನ್ನ ಚುನಾವಣೆ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಅವಧಿಗೆ ಪೂರ್ವ ಚುನಾವಣೆಗೆ ಹೋಗುವ ಯಾವುದೇ ಯೋಚನೆ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದರು.
ಗುಜರಾತ್ ಚುನಾವಣೆಯ ಜೊತೆಗೆ ಕರ್ನಾಟಕದ ಚುನಾವಣೆಯೂ ನಡೆಯಲಿದೆ . ಬೊಮ್ಮಾಯಿ ಸರ್ಕಾರ ಅವಧಿಗೆ ಪೂರ್ಣ ಚುನಾವಣೆಗೆ ಹೋಗುತ್ತದೆ ಎಂಬುವುದು ಕೇವಲ ಊಹಾಪೋಹಗಳು ಎಂದು ಅವರು ತಿಳಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬರುವ ಹಿನ್ನೆಲೆ ರಾಜ್ಯಕ್ಕೆ ಬಂದಿರುವ ಅರುಣ್ ಸಿಂಗ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಆಲೋಚನೆಯೂ ಇಲ್ಲ. ಸದ್ಯ ಯಾವ ರೀತಿಯಲ್ಲಿ ಇದೆಯೋ ಅದೇ ಮಾದರಿಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಸ್ಪಷ್ಟಪಸಿದರು.
ರಾಜ್ಯದಲ್ಲಿ ಬಿಜೆಪಿ ನಾಯಕರು ಲೋಕಪ್ರಿಯರಿದ್ದಾರೆ, ಜನಪ್ರಿಯರಿದ್ದಾರೆ. ಬೊಮ್ಮಾಯಿಯವರು ತಮ್ಮ ಆಡಳಿತ ವೈಖರಿಯಿಂದ ಹೆಸರು ಮಾಡಿದ್ದಾರೆ. ಈ‌ ಆಧಾರದಲ್ಲೇ ಚುನಾವಣೆ ಎದುರಿಸುತ್ತೇವೆ ಎಂದರು.
ರಾಹುಲ್‌ಗಾಂಧಿ ಧೈರ್ಯ ಮೆಚ್ಚಬೇಕು
ರಾಹುಲ್ ಗಾಂಧಿ ರಾಜ್ಯ ಭೇಟಿ ಕುರಿತು ಮಾತನಾಡಿದ ಅರುಣ್‌ಸಿಂಗ್, ದೇಶಾದ್ಯಂತ ಕಾಂಗ್ರೆಸ್ ಸೋಲುತ್ತಿದೆ. ಈ ಬಾರಿ ಕರ್ನಾಟಕದಲ್ಲೂ ಕಾಂಗ್ರೆಸ್ ಗೆ ಸೋಲು ಕಟ್ಟಿಟ್ಟ ಬುತ್ತಿ. ಸೋಲಾಗುತ್ತೆ ಅಂತ ಗೊತ್ತಿದ್ದರೂ ರಾಹುಲ್ ಗಾಂಧಿ ಇಲ್ಲಿಗೆ ಬರೋ ಧೈರ್ಯ ತೋರಿಸಿರೋದು ಮೆಚ್ಚಬೇಕಾದದ್ದೇ ಎಂದು ವ್ಯಂಗ್ಯವಾಡಿದರು.
ಬಹಳ ಧೈರ್ಯದಿಂದ ರಾಹುಲ್ ಗಾಂಧಿ ಇಲ್ಲಿಗೆ ಬಂದಿದ್ದಾರೆ. ಅವರು ಬಂದು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿ. ಆದರೆ, ಅವರ ನೇತೃತ್ವದಲ್ಲಿ ಯಾವುದೂ ನೆಟ್ಟಗೆ ನಡೀತಿಲ್ಲ, ಅವರಿಂದ ಹೊಸದೇನನ್ನೂ ಮಾಡುವುದಕ್ಕೆ ಆಗುತ್ತಿಲ್ಲ. ಕಾಂಗ್ರೆಸ್ ದೇಶದಲ್ಲಿ ಎಲ್ಲಾ ಕಡೆ ಸೋಲುತ್ತದೆ. ಅದರಂತೆ ಮುಂದೆ ಕರ್ನಾಟಕದಲ್ಲಿಯೂ ಸೋಲುತ್ತದೆ ಎಂದು ಭವಿಷ್ಯ ನುಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!