ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಮಿಜೋರಾಂ ಹಾಗೂ ಛತ್ತೀಸ್‌ಗಢ ಸೇರಿದಂತೆ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣೆ ಆಯೋಗವು ಭಾನುವಾರದಂದು (ಅಕ್ಟೋಬರ್ 8) ಘೋಷಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ನವೆಂಬರ್ ಎರಡನೇ ವಾರ ಹಾಗೂ ಡಿಸೆಂಬರ್ ಮೊದಲ ವಾರದಲ್ಲಿ ಐದೂ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿವೆ ಎಂದು ಚುನಾವಣಾ ಆಯೋಗದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.