Tuesday, August 16, 2022

Latest Posts

ಪೊನ್ನಂಪೇಟೆ ಬಂದ್: ಸಾರ್ವಜನಿಕರಿಂದ ವ್ಯಾಪಕ ಬೆಂಬಲ

ಹೊಸದಿಗಂತ ವರದಿ, ಕೊಡಗು:

ನರಹಂತಕ ಹುಲಿಯನ್ನು ಸೆರೆಹಿಡಿಯುವಲ್ಲಿ ಅಥವಾ ಗುಂಡು ಹೊಡೆದು ಸಾಯಿಸುವಲ್ಲಿ ವಿಫಲವಾದ ಅರಣ್ಯ ಇಲಾಖೆಯ ವಿರುದ್ಧ ಕರೆ ನೀಡಲಾಗಿರುವ ಪೊನ್ನಂಪೇಟೆ ತಾಲೂಕು ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪೊನ್ನಂಪೇಟೆ ತಾಲೂಕಿನ ಕುಟ್ಟ, ಶ್ರೀಮಂಗಲ, ಟಿ ಶೆಟ್ಟಿಗೇರಿ, ಹುದಿಕೇರಿ, ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಪೊನ್ನಪ್ಪಸಂತೆ ಭಾಗದ ಅಂಗಡಿ ಮುಗ್ಗಟ್ಟುಗಳು ಸಂಪೂರ್ಣ ಬಂದ್ ಆಗಿದ್ದು, ವಾಹನ ಸಂಚಾರವೂ ವಿರಳವಾಗಿತ್ತು.

ನರಹಂತಕ ಹುಲಿಯನ್ನು ಗುಂಡು ಹೊಡೆದು ಸಾಯಿಸಬೇಕೆಂದು ಒತ್ತಾಯಿಸಿ ಬುಧವಾರ ವಾಹನ ಜಾಥಾ,ಅರಣ್ಯ ಕಚೇರಿಗೆ ಮುತ್ತಿಗೆ,ಹೆದ್ದಾರಿ ತಡೆ ಮಾಡಿ ಪ್ರತಿಭಟನೆ ನಡೆಸಲಾಗಿತ್ತಲ್ಲದೆ, ಇಂದು ಪೊನ್ನಂಪೇಟೆ ತಾಲೂಕು ಬಂದ್’ಗೆ ವಿವಿಧ ಸಂಘ ಸಂಸ್ಥೆಗಳು ಹಾಗೂ ಬೆಳೆಗಾರರ ಸಹಕಾರದೊಂದಿಗೆ ರಾಜ್ಯ ರೈತಸಂಘದ ಜಿಲ್ಲಾ ಘಟಕ ಕರೆ ನೀಡಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss