ಕಳಪೆ ಬ್ಯಾಟಿಂಗ್​​: ಆಫ್ರಿಕಾ ಸರಣಿಯಿಂದ ಕೊಹ್ಲಿ ಔಟ್?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಟೀಂ ಇಂಡಿಯಾದ ರನ್​ ಮಷಿನ್​ ಖ್ಯಾತಿಯ ವಿರಾಟ್​​ ಕೊಹ್ಲಿ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗುಳಿದು, ವಿಶ್ರಾಂತಿ ಪಡೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಕಳೆದ ಕೆಲ ವರ್ಷಗಳಿಂದ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ಕೊಹ್ಲಿಗೆ ಬಿಸಿಸಿಐ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚನೆ ನೀಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ.
ಕಳೆದ ಮೂರು ವರ್ಷಗಳಿಂದ ಶತಕ ವಂಚಿತರಾಗಿರುವ ವಿರಾಟ್​ ಕೊಹ್ಲಿ ಪ್ರಸ್ತುತ ಐಪಿಎಲ್​​ನಲ್ಲೂ ಕಳಪೆ ಫಾರ್ಮ್​​ ಮುಂದುವರೆಸಿದ್ದು, ಮೂರು ಸಲ ಗೋಲ್ಡನ್ ಡಕೌಟ್​​​ ಆಗಿದ್ದಾರೆ. ಹೀಗಾಗಿ, ಅವರಿಗೆ ವಿಶ್ರಾಂತಿ ನೀಡಬೇಕೆಂದು ಅನೇಕ ಕ್ರಿಕೆಟರ್ಸ್​ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಐಪಿಎಲ್​ ಮುಕ್ತಾಯಗೊಳ್ಳುತ್ತಿದ್ದಂತೆ ಟೀಂ ಇಂಡಿಯಾ ಜೂನ್​ 9ರಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾಗಿಯಾಗಲಿದ್ದು, ಇದರ ಬೆನ್ನಲ್ಲೇ ಇಂಗ್ಲೆಂಡ್​ ಪ್ರವಾಸ ಕೈಗೊಳ್ಳಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!