ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂಗನವಾಡಿಗೆ ಬಡವರ ಮಕ್ಕಳು ಬರುತ್ತಾರೆ, ಅವರ ಆರೋಗ್ಯ ಕಾಪಾಡಲು ಪೌಷ್ಟಿಕಾಂಶ ಹೆಚ್ಚಿಸಲು ಮೊಟ್ಟೆ ನೀಡಲಾಗುತ್ತದೆ. ಅಂತಹ ಮಕ್ಕಳಿಗೆ ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆಯಾಗಿರುವುದು ನನ್ನ ಗಮನಕ್ಕೆ ಬಂದಿದೆ. ತಕ್ಷಣ ಈ ಮೊಟ್ಟೆ ಪೂರೈಕೆ ವ್ಯವಸ್ಥೆಯನ್ನೇ ಸಮಗ್ರವಾಗಿ ಬದಲಾಯಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್ ಹೇಳಿದ್ದಾರೆ.
ಅವರು ಶನಿವಾರ, ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದ ಕೆಲವು ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆ ಮಾಡಿರುವ ಘಟನೆ ನಡೆದಿರುವುದು ನನಗೆ ಬಹಳ ಮುಜುಗರವನ್ನುಂಟು ಮಾಡಿದೆ. ಈ ಘಟನೆಗೆ ಕಾರಣರಾದವರ ಮೇಲೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದೇನೆ ಎಂದರು.
ಶುಕ್ರವಾರ ಸಿಎಂ ಮಂಡಿಸಿದ ಬಜೆಟ್ ಒಂದವ ವರ್ಗದವರ ಪರವಾಗಿದೆ ಎಂಬ ಬಿಜೆಪಿ ಆರೋಪಕ್ಕೆ, ಕಾಂಗ್ರೆಸ್ ಯಾವತ್ತೂ ಬಸವ ಬುದ್ದ ಅಂಬೇಡ್ಕರ್ ತತ್ವದಡಿ ಜಾತ್ಯಾತೀತವಾಗಿ ಕೆಲಸ ಮಾಡುತ್ತದೆ, ಆದ್ದರಿಂದ ಈ ಆರೋಪದಲ್ಲಿ ಹುರುಳಿಲ್ಲ ಎಂದರು.
ಉಡುಪಿ ಜಿಲ್ಲೆಯ ಪಡಿತರದಾರರಿಗೆ ಕುಚ್ಚಲಕ್ಕಿ ಪೂರೈಕೆ ಬಗ್ಗೆ ಮಾತನಾಡಿದ ಸಚಿವ, ಕುಚ್ಚಲಕ್ಕಿಯನ್ನೇ ನೀಡುತ್ತೇವೆ ಎಂದು ನಿರ್ದಿಷ್ಟವಾಗಿ ಹೇಳಲಿಕ್ಕಾಗುವುದಿಲ್ಲ. 10 ಕೆಜಿ ಅಕ್ಕಿಯನ್ನು ಕೊಡುತ್ತೇವೆ ಜೊತೆಗೆ ಆಹಾರಧಾನ್ಯಗಳನ್ನೂ ಸೇರಿಸಿ ಕೊಡುತ್ತೇವೆ ಎಂದರು.