ವಂದೇ ಭಾರತ್‌ ಎಕ್ಸ್‌ಪ್ರೆಸ್‌ ನಲ್ಲಿ ಕಳಪೆ ಗುಣಮಟ್ಟದ ಆಹಾರ ಪೂರೈಕೆ: IRCTC ನೀಡಿತು ಪ್ರತಿಕ್ರಿಯೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಕಳಪೆ ಗುಣಮಟ್ಟದ ಆಹಾರ (Food) ನೀಡುತ್ತಿರುವುದನ್ನು ತೋರಿಸುವ ವಿಡಿಯೋವನ್ನು (Video) ಪ್ರಯಾಣಿಕರೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ (Social Media) ಪೋಸ್ಟ್ ಮಾಡಿದ್ದಾರೆ.

ವಿಶಾಖಪಟ್ಟಣದಿಂದ ಹೈದರಾಬಾದ್ ಕಡೆಗೆ ಸಾಗುವ ವಂದೇ ಭಾರತ್ ರೈಲಿನಲ್ಲಿ ಈ ವಿಡಿಯೋ ಚಿತ್ರೀಕರಿಸಲಾಗಿದ್ದು, ಪ್ರಯಾಣಿಕನು ತಾನು ರೈಲಿನಲ್ಲಿ ಸೇವಿಸಿದ ಆಹಾರದಿಂದ ಎಣ್ಣೆಯನ್ನು (Oil) ಅಂಶ ಅಧಿಕವಾಗಿದ್ದು, ಎಂದು ಹೇಳಿದ್ದು, ಜೊತೆಗೆ ಕೇಂದ್ರ ಸರ್ಕಾರವು ಮಹತ್ವಾಕಾಂಕ್ಷೆಯಿಂದ ಪರಿಚಯಿಸಿದ ವಂದೇ ಭಾರತ್ ರೈಲಿನಲ್ಲಿ ಆಹಾರದ ಬೆಲೆ ತುಂಬಾ ಹೆಚ್ಚಾಗಿದೆ, ಆದರೆ ಗುಣಮಟ್ಟ ತುಂಬಾ ಕಳಪೆಯಾಗಿದೆ ಎಂದು ಪೋಸ್ಟ್‌ನ ಶೀರ್ಷಿಕೆಯಲ್ಲಿ ತಿಳಿಸಿದ್ದಾನೆ.

ಇನ್ನು, ಈ ವಿಡಿಯೋವನ್ನು ಹಲವಾರು ಬಳಕೆದಾರರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಹಲವು ನೆಟ್ಟಿಗರು ಐಆರ್‌ಸಿಟಿಸಿ ವಿರುದ್ಧ ತರಾಟೆಗೆ ತೆಗೆದುಕೊಂಡಿದ್ದಾರೆ. ತಮಗೂ ಇದೇ ರೀತಿಯ ಅನುಭವ ಆಗಿದೆ ಎಂದು ಇನ್ನು ಕೆಲವರು ಐಆರ್‌ಸಿಟಿಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೀಗ ಈ ವಿಡಿಯೋ ಕ್ಲಿಪ್‌ಗೆ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಸಹ ಪ್ರತಿಕ್ರಿಯೆ ನೀಡಿದೆ. “ಸರ್, ಸರಿಪಡಿಸುವ ಕ್ರಮಗಳಿಗಾಗಿ ಸಂಬಂಧಪಟ್ಟ ಅಧಿಕಾರಿಗೆ ತಿಳಿಸಲಾಗಿದ” ಎಂದು ಐಆರ್‌ಸಿಟಿಸಿ ತಮ್ಮ ಟ್ವಿಟ್ಟರ್‌ ಖಾತೆಯಿಂದ ಟ್ವೀಟ್‌ ಮಾಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!