ಪೂರನ್ ನ ಅಬ್ಬರದ ಬ್ಯಾಟಿಂಗ್: ಮುಂಬೈ ಇಂಡಿಯನ್ಸ್ ಮುಡಿಗೆ ಚೊಚ್ಚಲ MLC ಕಿರೀಟ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚೊಚ್ಚ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಎಂಐ ನ್ಯೂಯಾರ್ಕ್‌ ತಂಡವು ಚಾಂಪಿಯನ್‌ ಆಗಿ ಹೊರಹೊಮ್ಮಿದೆ.

ಫೈನಲ್‌ ಪಂದ್ಯದಲ್ಲಿ ಎಂಐ ನ್ಯೂಯಾರ್ಕ್ ತಂಡದ ನಾಯಕ ನಿಕೋಲಸ್ ಪೂರನ್ ನ ಅಬ್ಬರದ ಶತಕದ ನೆರವಿನಿಂದ ಸೇಟಲ್ ಒರಕಸ್ ಎದುರು ಭರ್ಜರಿ ಗೆಲುವು ಸಾಧಿಸಿತು.
ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಖಾತೆಗೆ ಮತ್ತೊಂದು ಟ್ರೋಫಿ ಸೇರ್ಪಡೆಯಾಗಿದೆ.

ದಲ್ಲಾಸ್‌ನಲ್ಲಿ ನಡೆದ ಮೇಜರ್ ಲೀಗ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಒರಕಸ್ ತಂಡವು ವಿಕೆಟ್ ಕೀಪರ್ ಬ್ಯಾಟರ್ ಕ್ವಿಂಟನ್ ಡಿ ಕಾಕ್ ಬಾರಿಸಿದ ಆಕರ್ಷಕ 87 ರನ್‌ಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 183 ರನ್ ಕಲೆಹಾಕಿತು.

ಇನ್ನು ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಎಂಐ ನ್ಯೂಯಾರ್ಕ್‌ ತಂಡಕ್ಕೆ ನಾಯಕ ನಿಕೋಲಸ್ ಪೂರನ್‌ ಕೇವಲ 55 ಎಸೆತಗಳನ್ನು ಎದುರಿಸಿ ಅಜೇಯ 137 ರನ್ ಚಚ್ಚುವ ಮೂಲಕ ತಂಡ 7 ವಿಕೆಟ್ ಸುಲಭ ಜಯ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಫೈನಲ್‌ ಪಂದ್ಯದಲ್ಲಿ ನಾಯಕನ ಆಟ ಪ್ರದರ್ಶಿಸಿದ ನಿಕೋಲಸ್ ಪೂರನ್‌, 13 ಸಿಕ್ಸರ್ ಹಾಗೂ 10 ಬೌಂಡರಿಗಳನ್ನು ಸಿಡಿಸುವ ಮೂಲಕ ಕ್ರಿಕೆಟ್ ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!