ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರೈಸ್ತರ ಪರಮೋಚ್ಚ ಗುರು ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದ್ದು, ಬುಧವಾರ ಬೆಳಿಗ್ಗೆ ಸೇಂಟ್ ಪೀಟರ್ಸ್ ಬೆಸಿಲಿಕಾದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕ ದರುಶನಕ್ಕೆ ಇಡಲಾಗುವುದು ಎಂದು ವ್ಯಾಟಿಕನ್ ಪ್ರಕಟಣೆಯಲ್ಲಿ ತಿಳಿಸಿದೆ.
ಅಂತ್ಯಕ್ರಿಯೆಯ ವಿಧಿ ವಿಧಾನಗಳನ್ನು ಶನಿವಾರ ಬೆಳಿಗ್ಗೆ 10 ಗಂಟೆಗೆ ರೋಮ್‌ನ ಬೆಸಿಲಿಕಾ ಆಫ್ ಸೇಂಟ್ ಮೇರಿ ಮೇಜರ್‌ನಲ್ಲಿ ನಡೆಸಲು ಕಾರ್ಡಿನಲ್‌ಗಳ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದೆ.
ಅಂತ್ಯಕ್ರಿಯೆ ಪ್ರಕ್ರಿಯೆಯಲ್ಲಿ ಭಾಗಿಯಾಗಲು ಮತ್ತು ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಪ್ರಸ್ತುತ ಎಲ್ಲಾ ಕಾರ್ಡಿನಲ್‌ಗಳು ರೋಮ್‌ನಲ್ಲಿ ಸೇರಿದ್ದಾರೆ.
ಅಂತ್ಯಕ್ರಿಯೆ ವೇಳೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉಕ್ರೇನ್ ಅಧ್ಯಕ್ಷ ವ್ಲಾದಿಮಿರ್ ಝೆಲೆನ್‌ಸ್ಕಿ ಸೇರಿದಂತೆ ಜಾಗತಿಕ ನಾಯಕರು ಭಾಗಿಯಾಗುವ ನಿರೀಕ್ಷೆ ಇದೆ.