Wednesday, October 5, 2022

Latest Posts

ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ್​ ಗೆ ಹೃದಯಾಘಾತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ್​ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಅವರನ್ನು ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ದೆಹಲಿಯ ಜಿಮ್​​​ನಲ್ಲಿ ವರ್ಕ್​​ಔಟ್ ಮಾಡ್ತಿದ್ದಾಗ ಘಟನೆ ನಡೆದಿದೆ . ಸದ್ಯ ನಟ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಮೂಲಗಳು ತಿಳಿಸಿವೆ.

ಸ್ಟ್ಯಾಂಡ್-ಅಪ್​ ಕಮೇಡಿಯನ್ ಆಗಿರುವ ರಾಜು ಶ್ರೀವಾಸ್ತವ್​​ ನಿನ್ನೆ ರಾತ್ರಿ ಜಿಮ್​​ನಲ್ಲಿ ದೈಹಿಕ ಕಸರತ್ತು ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದರು. ತಕ್ಷಣವೇ ಏಮ್ಸ್‌ಗೆ​ ಕರೆತರಲಾಗಿತ್ತು. ಡಾ.ನಿತೀಶ್ ನ್ಯಾಯ್ ನೇತೃತ್ವದ ಹೃದ್ರೋಗ ಮತ್ತು ತುರ್ತು ವಿಭಾಗದ ಎಐಐಎಂಎಸ್ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಈ ಕುರಿತಂತೆ ರಾಜು ಶ್ರೀವಾಸ್ತವ್​ ಸಹೋದರ ಆಶಿಶ್ ಶ್ರೀವಾಸ್ತವ್​ ಮಾಹಿತಿ ನೀಡಿದರು.

ಮೂಲತಃ ಕಾನ್ಪುರ ಮೂಲದವರಾಗಿರುವ ಇವರು, ಉತ್ತರ ಪ್ರದೇಶ ಚಲನಚಿತ್ರ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!