ಜನಪ್ರಿಯ ಗಾಯಕಿ, ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜನಪ್ರಿಯ ಜಾನಪದ ಗಾಯಕಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ ಅವರು ಮಂಗಳವಾರ ಸಂಜೆ ನಿಧನರಾಗಿದ್ದಾರೆ.

72 ವಯಸ್ಸಿನ ಖ್ಯಾತ ಗಾಯಕಿ ಶಾರದಾ ಅವನ್ನು ಅನಾರೋಗ್ಯದ ಹಿನ್ನೆಲೆ ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. ಅಕ್ಟೋಬರ್.25 ರಿಂದ ಆಸ್ಪತ್ರೆಯ ಆಂಕೊಲಾಜಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 2017 ರಲ್ಲಿ ಅವರಿಗೆ ಮಲ್ಟಿಪಲ್ ಮೈಲೋಮಾ ರೋಗನಿರ್ಣಯ ದೃಢಪಟ್ಟಿತ್ತು. ಇದು ಮೂಳೆ ಮಜ್ಜೆಯ ಮೇಲೆ ಪರಿಣಾಮ ಬೀರುವ ಒಂದು ರೀತಿಯ ಕ್ಯಾನ್ಸರ್. ಸಿನ್ಹಾ ಅವರನ್ನು ವೆಂಟಿಲೇಟರ್‌ನಲ್ಲಿರಿಸಲಾಗಿತ್ತು.

‘ಕಾರ್ತಿಕ್ ಮಾಸ್ ಇಜೋ ರಿಯಾ’, ‘ಕೋಯಲ್ ಬಿನ್’ ತರಹದ ಜನಪದ ಗೀತೆಗಳು, ‘ಗ್ಯಾಂಗ್ಸ್‌ ಆಫ್ ವಸೇಪುರ್’ ಹಿಂದಿ ಸಿನಿಮಾದ ‘ತಾರ್‌ ಬಿಜಿಲಿ’, ‘ಹಮ್‌ ಆಪ್ಕೆ ಹೈ ಕೌನ್’ ಚಿತ್ರದ ‘ಬಾಬುಲ್’ ಹಾಡುಗಳ ಗಾಯನದಿಂದ ಶಾರದಾ ಅವರು ಛಾಪು ಮೂಡಿಸಿದ್ದರು. ಶಾರದಾ ಅವರನ್ನು ಅಭಿಮಾನಿಗಳು ‘ಬಿಹಾರಿ ಕೋಕಿಲಾ’ ಎಂದು ಕರೆಯುತ್ತಿದ್ದರು.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!