ಜನಪ್ರಿಯ ಗಾಯಕ ರಾಜು ಪಂಜಾಬಿ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಗಾಯನದ ಮೂಲಕ ಅಪಾರ ಸಂಖ್ಯೆಯಲ್ಲಿ ಅಭಿಮಾನಿ ಬಳಗವನ್ನು ಹೊಂದಿದ್ದ ಖ್ಯಾತ ಗಾಯಕ ರಾಜು ಪಂಜಾಬಿ (40) ಇಂದು ನಿಧನರಾಗಿದ್ದಾರೆ.

ಜಾಂಡೀಸ್‌ ಕಾಯಿಲೆಯಿಂದ ಬಳಲುತ್ತಿದ್ದ ಅವರ ಆರೋಗ್ಯದ ಪರಿಸ್ಥಿತಿ ಇತ್ತೀಚೆಗೆ ತೀರಾ ಹದಗೆಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು
ಹರಿಯಾಣದ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ.

ಗಾಯಕನ ನಿಧನದ ಸುದ್ದಿ ಕೇಳಿ ಅವರ ಅಭಿಮಾನಿಗಳು ಶಾಕ್‌ ಆಗಿದ್ದಾರೆ. ಅವರ ಸಾವಿಗೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ರಾಜು ಪಂಜಾಬಿ ಅವರ ಪಾರ್ಥಿವ ಶರೀರವನ್ನು ಸ್ಥಳೀಯ ರಾವತ್ಸರ್ ಖೇಡಾಕ್ಕೆ ಕೊಂಡೊಯ್ಯಲಾಗುತ್ತದೆ, ಅಲ್ಲಿ ಅವರ ಅಂತ್ಯಕ್ರಿಯೆಯನ್ನು ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!