October 10, 2026
Saturday, October 10, 2026
spot_img

ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣಾದ ತಮಿಳು ಜನಪ್ರಿಯ ನಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳು ಜನಪ್ರಿಯ ಕಿರುತೆರೆ ನಟಿ ಸುಭಾಷಿಣಿ ಅವರು ಚೆನ್ನೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ .

ಮೂಲತಃ ಶ್ರೀಲಂಕಾದವರಾಗಿರುವ ಸುಭಾಷಿಣಿ ಸನ್ ಟಿವಿಯ ಜನಪ್ರಿಯ ಧಾರಾವಾಹಿ ಕಾಯಲ್‌ನಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದರು. ಚೆನ್ನೈನ ಅಯ್ಯಪ್ಪಂತಂಗಲ್‌ನಲ್ಲಿರುವ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ ಅವರು ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುಭಾಷಿಣಿ 2024ರಲ್ಲಿ ಬೆಂಗಳೂರು ಮೂಲದ ಬಿಪಿನ್ ಚಂದ್ರನ್ ಅವರನ್ನು ವಿವಾಹವಾಗಿದ್ದರು.

ಪೊಲೀಸರ ಮಾಹಿತಿ ಪ್ರಕಾರ, ಆತ್ಮಹತ್ಯೆಗೂ ಮುನ್ನ ತಮ್ಮ ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡಿದ್ದು, ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ನೇಣಿಗೆ ಶರಣಾಗಿದ್ದಾರೆ. ಕೂಡಲೇ ಅವರ ಪತಿ ಅಪಾರ್ಟ್ಮೆಂಟ್‌ನ ಸಿಬ್ಬಂದಿಗೆ ಕರೆ ಮಾಡಿ, ಮಾಹಿತಿ ನೀಡಿದ್ದಾರೆ. ಸದ್ಯ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Must Read