ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಮಧನ್ ಬಾಬ್ (71) ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟ ಶನಿವಾರ ಸಂಜೆ ಅಡ್ಯಾರ್ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
1984ರಲ್ಲಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ನಟ ಮಧನ್ ಬಾಬ್, ಕಮಲ್ ಹಾಸನ್, ರಜನಿಕಾಂತ್, ಅಜಿತ್ ಕುಮಾರ್, ಸೂರ್ಯ ಮತ್ತು ವಿಜಯ್ ಅವರಂತಹ ಸ್ಟಾರ್ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.
ಚಲನಚಿತ್ರೋದ್ಯಮದಲ್ಲಿ ಅವರ ಸುದೀರ್ಘ ವೃತ್ತಿಜೀವನದಲ್ಲಿ, ಅವರು 150ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ತಮಿಳು ಮಾತ್ರವಲ್ಲದೆ ಮಲಯಾಳಂ, ಹಿಂದಿ ಮತ್ತು ತೆಲುಗು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ನಟನ ನಿಧನಕ್ಕೆ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ.