ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ಸ್ನೇಹಲ್ ರೈ ತಮಗಿಂತ 21 ವರ್ಷದ ಹಿರಿಯ ರಾಜಕಾರಣಿ ಮಾಧವೇಂದ್ರ ಕುಮಾರ್ ರೈ ಅವರನ್ನು 10 ವರ್ಷಗಳ ಹಿಂದೆಯೇ ಮದುವೆಯಾಗಿರುವುದಾಗಿ ಹೇಳಿದ್ದಾರೆ.
ನಟಿ ವಿವಾಹಿತ ಮಹಿಳೆಯರ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ರೆಡಿಯಾಗಿದ್ದಾರೆ. ಹೀಗಾಗಿ ನಟಿ ತಮ್ಮ ಮದುವೆ ಬಗ್ಗೆ ಸಾರ್ವಜನಿಕವಾಗಿ ಮಾತನಾಡಲು ಮುಂದಾಗಿದ್ದಾರೆ. ತನಗಿಂತ 21 ವರ್ಷ ಹಿರಿಯ ರಾಜಕಾರಣಿಯನ್ನು ತಾನು ಮದುವೆಯಾಗಿರುವುದಾಗಿ ನಟಿ ಹೇಳಿಕೊಂಡಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ನಟಿ ಸ್ನೇಹಲ್ ರೈ, ರಾಜಕಾರಣಿ ಮಾಧವೇಂದ್ರ ಕುಮಾರ್ ರೈ ಅವರನ್ನು 10 ವರ್ಷ ಹಿಂದೆಯೇ ಮದುವೆಯಾಗಿದ್ದೇನೆ. ಮದುವೆಯ ಬಗ್ಗೆ ಬಹಿರಂಗಪಡಿಸಿದರೆ ಎಲ್ಲಿ ನನ್ನ ವೃತ್ತಿ ಜೀವನಕ್ಕೆ ತೊಂದರೆಯಾಗಬಹುದು ಎಂದು ಮುಚ್ಚಿಟ್ಟಿದ್ದೆ. ಆದರೆ ನನ್ನ ಪತಿ ಹಾಗೂ ಅವರ ಕುಟುಂಬ ಸದಾ ನನ್ನೊಂದಿಗೆ ಬೆಂಬಲವಾಗಿದ್ದಾರೆ ಎಂದು ಸ್ನೇಹಲ್ ಹೇಳಿಕೊಂಡಿದ್ದಾರೆ.