ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಪೋರ್ಷೆ ಪುಣೆ ಕಾರು ಅಪಘಾತ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಕಾರು ಅಪಘಾತದಲ್ಲಿ ಇಬ್ಬರನ್ನು ಕೊಂದ ಅಪ್ರಾಪ್ತ ಬಾಲಕನ ತಂದೆ ವಿಶಾಲ್ ಅಗರ್ವಾಲ್ ಶುಕ್ರವಾರದವರೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
ಪೋರ್ಷೆ ಕಾರು ಅಪಘಾತದಲ್ಲಿ ಪುಣೆಯಲ್ಲಿ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶದ 24 ವರ್ಷದ ಐಟಿ ಉದ್ಯೋಗಿ ಅನಿಶ್ ಅವಧಿಯಾ ಮತ್ತು ಅಶ್ವಿನಿ ಕೋಷ್ಟಾ ಸಾವನ್ನಪ್ಪಿದ್ದರು. ಪೋರ್ಷೆ ಕಾರು ಅಪಘಾತದಲ್ಲಿ ಇಬ್ಬರನ್ನು ಕೊಂದ ಅಪ್ರಾಪ್ತ ಯುವಕನ ತಂದೆ ವಿಶಾಲ್ ಅಗರ್ವಾಲ್ ಅವರನ್ನು ಶುಕ್ರವಾರದವರೆಗೆ (ಮೇ 24) ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಅಗರ್ವಾಲ್ ಅವರನ್ನು ಪೊಲೀಸರು ಇಂದು ಪುಣೆ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದರು.