Friday, June 2, 2023

Latest Posts

ಮೂರನೇ ಬಾರಿಗೆ ಕರೊನಾ ಸೋಂಕಿಗೆ ಒಳಗಾದ ಟಾಲಿವುಡ್‌ ನಟ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಟಾಲಿವುಡ್ ಖ್ಯಾತ ನಟ ಮತ್ತು ಬರಹಗಾರ ಪೋಸಾನಿ ಕೃಷ್ಣ ಮುರಳಿ ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಬ್ಯುಸಿಯಾಗಿದ್ದಾರೆ. ಪ್ರಸ್ತುತ ಅವರು ಚಲನಚಿತ್ರಗಳಲ್ಲಿ ನಟಿಸುವುದರ ಜೊತೆಗೆ, ಎಪಿ ಚಲನಚಿತ್ರ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿಯೂ ಕೆಲಸ ಮಾಡುತ್ತಿದ್ದಾರೆ. ಪೋಸಾನಿ ಕೃಷ್ಣ ಮುರಳಿ ಅವರನ್ನು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಇಂದು ಬೆಳಗ್ಗೆ ದಾಖಲಿಸಲಾಗಿತ್ತು.

ಕಳೆದ ಕೆಲವು ದಿನಗಳಿಂದ ಕೆಮ್ಮು ಮತ್ತು ನೆಗಡಿಯಿಂದ ಬಳಲುತ್ತಿದ್ದ ಪೋಸಾನಿ ಕೃಷ್ಣ ಮುರಳಿ ಅವರನ್ನು ಇಂದು ಬೆಳಗ್ಗೆ ಹೈದರಾಬಾದ್ ಎಐಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಕೊರೊನಾ ಸೋಂಕಿನ ಶಂಕೆ ವ್ಯಕ್ತಪಡಿಸಿದ್ದಾರೆ. ಪರೀಕ್ಷೆಗಳ ನಂತರ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ ಎಂದರು. ಪೋಸಾನಿ ಈ ಹಿಂದೆ ಎರಡು ಬಾರಿ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಇದೀಗ ಮತ್ತೊಮ್ಮೆ ಕೊರೊನಾ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿರುವುದರಿಂದ ಕುಟುಂಬಸ್ಥರು ಆತಂಕಗೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!