ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಗ ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾತನಾಡಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ತಿಳಿಸಿದರು.
ಉತ್ತರ ಪ್ರದೇಶ ಹಾಗೂ ತಮಿಳುನಾಡುಯ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ರಕ್ಷಣಾ ಕಾರಿಡಾರ್ ಸ್ಥಾಪನೆ ಹಾಗೂ ಟನಲ್ ಯೋಜನೆ , ಬಳ್ಳಾರಿ ರಸ್ತೆಯಲ್ಲಿ ಲಿಂಕ್ ರೋಡ್ ಯೋಜನೆ, ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಯ ನಿರ್ಮಾಣಕ್ಕೆ ಅವಶ್ಯವಿರುವ ಕೇಂದ್ರ ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ನೀಡುವಂತೆ ಕೋರಿ ಮನವಿ ಸಲ್ಲಿಸಿರುವ ಬಗ್ಗೆ ವಿವರಿಸಿದರು.
ರಾಹುಲ್ ಗಾಂಧಿಯನ್ನು ಭೇಟಿಯಾಗುವ ಕಾರ್ಯಕ್ರಮವಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ರಾಹುಲ್ ಗಾಂಧಿಯವರ ಸಮಯವನ್ನು ಸಾಧ್ಯವಾದರೆ ಭೇಟಿಯಾಗುವುದಾಗಿ ತಿಳಿಸಿದರು.