ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೇರಳದಿಂದ ಮಹಾರಾಷ್ಟ್ರದ ತನಕ ಲಘು ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣವಿದೆ.
ನಿನ್ನೆ ರಾತ್ರಿ ಬೆಂಗಳೂರು, ಚಿತ್ರದುರ್ಗ, ತುಮಕೂರು, ಭದ್ರಾವತಿ, ದಾವಣಗೆರೆ, ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಮಳೆ ಸುರಿದಿದೆ.
ಲಘು ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಇನ್ನೆರಡು ದಿನ ಉತ್ತರ ಕನ್ನಡ ಜಿಲ್ಲೆ, ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಾಪುರ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯಾದ್ಯಂತ ಕೆಲವೆಡೆ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.