July 24, 2026
Friday, July 24, 2026
spot_img

ಹಾರಂಗಿ ಜಲಾಶಯದಿಂದ ನದಿಗೆ ನೀರು ಬಿಡುಗಡೆ ಸಾಧ್ಯತೆ: ನದಿ ಪಾತ್ರದ ಜನರಿಗೆ ಕಟ್ಟುನಿಟ್ಟಿನ ಎಚ್ಚರಿಕೆ

ಹೊಸದಿಗಂತ ವರದಿ ಕುಶಾಲನಗರ

ಕುಶಾಲನಗರ: ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಜಲಾಶಯ ಭರ್ತಿಯಾಗಲು ಇನ್ನು ಕೇವಲ 3 ಅಡಿಗಳಷ್ಟು ಬಾಕಿ ಇದೆ.

ಕಳೆದ ಸಾಲಿನಲ್ಲಿ ಜೂನ್ ತಿಂಗಳಲ್ಲೇ ತುಂಬಿ ತುಳುಕುತ್ತಿದ್ದ ಹಾರಂಗಿ ಜಲಾಶಯ ಈ ಬಾರಿ ಜುಲೈ ಕೊನೆಯ ವಾರಕ್ಕೆ ಭರ್ತಿಯಾಗುವ   ಲಕ್ಷಣ   ಕಂಡುಬರುತ್ತಿದೆ.

ಇಂದು ನೀರು ಬಿಡುಗಡೆ ಸಾಧ್ಯತೆ:ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿರುವ ಹಿನ್ನೆಲೆ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಂಭವಿದ್ದು, ಜಲಾಶಯಕ್ಕೆ ಒಳಹರಿವು ಇನ್ನಷ್ಟು ಹೆಚ್ಚಾಗಬಹುದು.

ಇದನ್ನೂ ಓದಿ:

ಜಲಾಶಯವು ಶೀಘ್ರವೇ ಗರಿಷ್ಠ ಮಟ್ಟ ತಲುಪುವ ಕಾರಣ ಜು.25ರ ಮಧ್ಯಾಹ್ನ 2 ಗಂಟೆಯ ನಂತರ ಸುಮಾರು 3000 ರಿಂದ 5000 ಕ್ಯೂಸೆಕ್’ವರೆಗೆ ನೀರನ್ನು ನದಿಗೆ ಹರಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹಾರಂಗಿ ಮತ್ತು ಕಾವೇರಿ ನದಿ ಪಾತ್ರದಲ್ಲಿರುವ ಹಾಗೂ ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ-ಪಾಸ್ತಿ ಮತ್ತು ಜಾನುವಾರುಗಳ ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಅಭಿಯಂತರ ಮಹೇಶ್ ಎಂ.ಎಸ್. ಅವರು ಮನವಿ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !