ಹೊಸದಿಗಂತ ವರದಿ ಹಳಿಯಾಳ:
ಅಂಚೆ ಸಹಾಯಕನೋರ್ವ ನೇಣಿಗೆ ಶರಣಾದ ಘಟನೆ ಶನಿವಾರ ಬಸವರಾಜ್ ಚಲನಚಿತ್ರ ಮಂದಿರದ ಹತ್ತಿರದಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದಲ್ಲಿರುವ ಅಂಚೆ ಕಚೇರಿಯಲ್ಲಿ ಅಂಚೆ ಸಹಾಯಕನಾಗಿ ಕೆಲಸವನ್ನು ನಿರ್ವಹಿಸುತ್ತಿದ್ದ 30 ವರ್ಷ ವಯಸ್ಸಿನ ಮಹಾಂತೇಶ ಮಹಾದೇವ ತಳವಾರ ನೇಣಿಗೆ ಶರಣಾಗಿದ್ದಾನೆ. ಈತ ಅವಿವಾಹಿತನಾಗಿದ್ದು ಬಸವರಾಜ ಚಲನಚಿತ್ರ ಮಂದಿರದ ಹತ್ತಿರವಿರುವ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದನು.
ಈ ಬಗ್ಗೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.