ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಂಬಂಧ ಬಿಜೆಪಿಯಿಂದ ಪೋಸ್ಟರ್ ಅಭಿಯಾನವನ್ನು ಆರಂಭಿಸಲಾಗಿತ್ತು. ಈ ಹಿನ್ನಲೆಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ, ಎನ್.ರವಿಕುಮಾರ್ ಸೇರಿದಂತೆ 13 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿಯಿಂದ ಪೋಸ್ಟರ್ ಅಭಿಯಾನ ನಡೆಸಲಾಗಿತ್ತು. ಈ ಹಿನ್ನಲೆಯಲ್ಲಿ ಪಿಎಸ್ಐ ಶಶಿಧರ ವಣ್ಣೂರ ಅವರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಸಿ.ಟಿ ರವಿ ಸೇರಿದಂತೆ 13 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.