ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಪೋಸ್ಟರ್ ಆಂದೋಲನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಬಿಜೆಪಿ ವತಿಯಿಂದ ಇಂದು ಬೆಂಗಳೂರು ನಗರದಲ್ಲಿ ಪೋಸ್ಟರ್ ಅಂಟಿಸುವ ಆಂದೋಲನ ನಡೆಸಲಾಯಿತು.

ಈ ರೀತಿ ಪೋಸ್ಟರ್ ಅಂಟಿಸುತ್ತಿದ್ದ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಲೆಗಡುಕ ಸರಕಾರಕ್ಕೆ ಧಿಕ್ಕಾರ, ನೀತಿಗೆಟ್ಟ ಸರಕಾರಕ್ಕೆ ಧಿಕ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಧಿಕ್ಕಾರ ಮೊದಲಾದ ಘೋಷಣೆಗಳನ್ನು ಕೂಗಲಾಯಿತು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಸಿ.ಟಿ.ರವಿ, ಮುಖಂಡರಾದ ಜಗದೀಶ್ ಹಿರೇಮನಿ, ಉಮೇಶ್ ಶೆಟ್ಟಿ, ಮಾಧ್ಯಮ ಪ್ರಕೋಷ್ಠದ ರಾಜ್ಯ ಸಂಚಾಲಕ ಕರುಣಾಕರ ಖಾಸಲೆ, ಸಹ ಸಂಚಾಲಕ ಪ್ರಶಾಂತ ಕೆಡೆಂಜಿ, ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು. ಪೋಸ್ಟರ್ ಅಂಟಿಸುವ ಅಭಿಯಾನದಲ್ಲಿ ತೊಡಗಿದ್ದ ಎಲ್ಲರನ್ನೂ ಪೊಲೀಸರು ವಶಕ್ಕೆ ಪಡೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!