ಸಂಸದ ಶ್ರೀನಿವಾಸ್ ಪ್ರಸಾದ್ ವಿರುದ್ಧ ಪೋಸ್ಟರ್ ವಾರ್ ಸಮರ: ಸೈಬರ್ ಕ್ರೈಂ ಠಾಣೆಗೆ ಬಿಜೆಪಿ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಪೋಸ್ಟರ್ ವಾರ್ ಜೋರಾಗಿದೆ. ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನು ಅವಹೇಳನ ಮಾಡುವ ಪೋಸ್ಟರ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

‘ಶ್ರೀನಿವಾಸ್ ಪ್ರಸಾದ್ ಅರೆ ಹುಚ್ಚ, ರಾಜಕೀಯ ಬಿಟ್ಟು ಮನೆಯಲ್ಲಿರಲಿ ಎಂದು ಪೋಸ್ಟರ್ ನಲ್ಲಿ ಬರೆಯಲಾಗಿದೆ. ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಸಕತ್ ಸದ್ದು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಸಾದ್ ವಿರುದ್ಧ ಕಾಂಗ್ರೆಸ್ ಸಂಸದ ಬಾಲರಾಜ್ ಪೋಸ್ಟರ್ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಪೋಸ್ಟರ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಚಾಮರಾಜನಗರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಇತ್ತ ಬಾಲರಾಜ್ ಅವರು ಹನೂರು ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ‘ ಸುಳ್ಳು ಆರೋಪ ಮಾಡಿದವರಿಗೆ ಮಾದಪ್ಪನೇ ತಕ್ಕ ಶಾಸ್ತಿ ಮಾಡಲಿ, ಸಂಸದ ಶ್ರೀನಿವಾಸ್ ಪ್ರಸಾದ್ ಮೇಲೆ ನನಗೆ ತುಂಬಾ ಗೌರವವಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!