ಬಿಹಾರ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್​​ಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರದ (Bihar) ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್​​ಗೆ(Karpoori Thakur) ಮರಣೋತ್ತರ ಭಾರತ ರತ್ನ ಪ್ರಶಸ್ತಿ (Bharat Ratna) ಘೋಷಣೆ ಮಾಡಲಾಗಿದೆ.

ಠಾಕೂರ್ ಅವರು ಹಿಂದುಳಿದ ವರ್ಗಗಳ ಹೋರಾಟಕ್ಕಾಗಿ ಹೆಸರುವಾಸಿಯಾಗಿದ್ದರು. ಎರಡು ಬಾರಿ ಬಿಹಾರದ ಉಪಮುಖ್ಯಮಂತ್ರಿ, ಎರಡು ಬಾರಿ ಮುಖ್ಯಮಂತ್ರಿ ಮತ್ತು ದಶಕಗಳ ಕಾಲ ವಿರೋಧ ಪಕ್ಷದ ಶಾಸಕ ಮತ್ತು ನಾಯಕರಾಗಿದ್ದರು. 1952 ರಲ್ಲಿ ಮೊದಲ ವಿಧಾನಸಭೆಯಲ್ಲಿ ಚುನಾವಣೆಯಲ್ಲಿ ಗೆದ್ದ ನಂತರ ಅವರು ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸೋತಿಲ್ಲ.

ಕರ್ಪೂರಿ ಠಾಕೂರ್ ಡಿಸೆಂಬರ್ 1970 ಮತ್ತು ಜೂನ್ 1971 ರ ನಡುವೆ ಹಾಗೂ ಡಿಸೆಂಬರ್ 1977 -ಏಪ್ರಿಲ್ 1979 ರವರೆಗೆ ಬಿಹಾರದ ಮುಖ್ಯಮಂತ್ರಿಯಾಗಿದ್ದರು. 1988ರಲ್ಲಿ ತಮ್ಮ 64 ವಯಸ್ಸಿನಲ್ಲಿ ನಿಧನರಾದರು.

1924ರಲ್ಲಿ ಹುಟ್ಟಿದ ಕರ್ಪೂರಿ ಠಾಕೂರ್, ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ತೊಡಗಿಸಿಕೊಂಡ ಸ್ವಾತಂತ್ರ್ಯ ಹೋರಾಟಗಾರ. ಸ್ವಾತಂತ್ರ್ಯ ಹೋರಾಟದಲ್ಲಿ ಧುಮಿಕಿದ ಕರ್ಪೂರಿ ಠಾಕೂರ್ 26 ತಿಂಗಳು ಜೈಲು ವಾಸ ಅನುಭವಿಸಿದ್ದರು.

ಭಾರತದ ಸ್ವಾತಂತ್ರ್ಯ ಸಿಕ್ಕ ಬಳಿಕ ಬಿಹಾರ ಶಾಲೆಯಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಕರ್ಪೂರಿ ಠಾಕೂರ್, 1952ರಲ್ಲಿ ಬಿಹಾರ ವಿಧಾನಸಭೆಗೆ ಆಯ್ಕೆಯಾದರು. ಸೋಶಿಯಲಿಸ್ಟ್ ಪಾರ್ಟಿಯ ಅಭ್ಯರ್ಥಿಯಾಗಿ ತಾಜ್‌ಪುರ ಕ್ಷೇತ್ರದಿಂದ ಸ್ಪರ್ಧಿಸಿ ತಮ್ಮ ರಾಜಕೀಯ ಜೀವನ ಆರಂಭಿಸಿದರು. ಶಿಕ್ಷಣ ಸಚಿವರಾಗಿದ್ದ ವೇಳೆ ಬಿಹಾರ ಶಾಲೆಗಳಲ್ಲಿ ಇಂಗ್ಲೀಷ್ ಕಡ್ಡಾಯವನ್ನು ತೆಗೆದು ಹಾಕಿ ಆಯ್ಕೆಯಾಗಿ ಮಾಡಿ ಹೊಸ ಕ್ರಾಂತಿ ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!