Saturday, February 4, 2023

Latest Posts

ಜನರಲ್ ಬಿಪಿನ್ ರಾವತ್ ಅವರಿಗೆ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ ಭಾರತದ ಮೊದಲ ರಕ್ಷಣಾ ಮುಖ್ಯಸ್ಥ ದಿವಂಗತ ಜನರಲ್ ಬಿಪಿನ್ ರಾವತ್ ಅವರಿಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆಯಾಗಿದೆ.
ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಗುಲಾಮ್ ನಬಿ ಆಜಾದ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಕೇಂದ್ರ ಸರ್ಕಾರದಿಂದ ಗಣರಾಜ್ಯೋತ್ಸವ ದಿನಾಚರಣೆಯಂದು ಪ್ರತಿ ವರ್ಷ ನೀಡಲಾಗುವ ಪದ್ಮ ವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳನ್ನುಪ್ರಕಟಿಸಲಾಗಿದೆ. 2022ರ ಸಾಲಿನಲ್ಲಿ ನಾಲ್ವರು ಸಾಧಕರಿಗೆ ಪದ್ಮ ವಿಭೂಷಣ, 17 ಸಾಧಕರಿಗೆ ಪದ್ಮಭೂಷಣ ಹಾಗೂ 107 ವಿವಿಧ ಕ್ಷೇತ್ರದ ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!