ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿ ಘಟನೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಎರಡು ಸಲ ಮರಣೋತ್ತರ ಪರೀಕ್ಷೆ ನಡೆಸಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.ಆದ್ರೆ ಎರಡು ಸಲ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ ಎಂಬುದಾಗಿ ಹೇಳಿಕೆ ನೀಡಿರುವ ನಾಯಕರುಗಳು ನೋಡಿದ್ದಾರೆಯೇ? ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಹೇಳಿಕೆ ನೀಡಿದ್ದಾರೆ. ಇನ್ನು ಯಾರ ಮಾತನ್ನು ನಂಬಬೇಕು. ಎರಡು ಸಲ ಮರಣೋತ್ತರ ಪರೀಕ್ಷೆ ನಡೆಸಿಲ್ಲ ಎಂದಿರುವ ವೈದ್ಯರ ಮಾತನ್ನು ನಾನು ಕೂಡ ಒಪ್ಪುತ್ತೇನೆ ಎಂದು ಗೃಹ ಸಚಿವ ಡಾ. ಜಿ ಪರಮೆಶ್ವರ್ ಹೇಳಿದರು.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿ, ನಾನು ಮೂರನೇ ಸಲ ಗೃಹ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ಯಾವ ಸಂದರ್ಭದಲ್ಲಿ ಏನು ತೀರ್ಮಾನ ತೆಗೆದುಕೊಳ್ಳಬೇಕು. ನಮ್ಮ ರಾಜ್ಯದ ಕಾನೂನು ವ್ಯವಸ್ಥೆಯ ದೃಷ್ಟಿಯಿಂದ ಏನೆಲ್ಲ ತೀರ್ಮಾನ ತೆಗೆದುಕೊಳ್ಳಬೇಕು ಎಂಬ ಅರಿವು ನನಗಿದೆ ಎಂದರು.
38 ವರ್ಷ ರಾಜಕಾರಣ ಮಾಡಿದ್ದೇನೆ. ನನಗೂ ಕೂಡ ಅಪಾರವಾದ ಅನುಭವ ಇದೆ. ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಏನು ಕ್ರಮ, ಯಾವ ಸಂದರ್ಭದಲ್ಲಿ ತೆಗೆದುಕೊಳ್ಳಬೇಕು, ಕಠಿಣವಾದ ನಿರ್ಧಾರಗಳನ್ನು ಯಾವಾಗ ತೆಗೆದುಕೊಳ್ಳಬೇಕು ತೆಗೆದುಕೊಂಡಿದ್ದೇನೆ ಎಂದರು.

