ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ದೇಶದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆ INI-CET ಪರೀಕ್ಷೆಗಳನ್ನು ಮುಂದೂಡಿಕೆ ಮಾಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
AIIMS, JIPMER, PGIMER ಮತ್ತು NIMHANS ಗಳಲ್ಲಿ ವೈದ್ಯಕೀಯ ಸ್ನಾತಕೋತ್ತರ ಪ್ರವೇಶಕ್ಕೆ ನಡೆಯುವ ಪರೀಕ್ಷೆಗಳು ಇವಾಗಿದ್ದು, ಜೂನ್ 16 ಕ್ಕೆ ಪರೀಕ್ಷೆಯ ದಿನಾಂಕ ನಿಗದಿಪಡಿಸಲಾಗಿತ್ತು. ಕನಿಷ್ಠ ಒಂದು ತಿಂಗಳು ಪರೀಕ್ಷೆಗಳನ್ನು ಮುಂದೂಡುವಂತೆ ಕೋರ್ಟ್ ಆದೇಶದಲ್ಲಿ ತಿಳಿಸಿದೆ.