ನೀಟ್ ಪರೀಕ್ಷೆ ದಿನಾಂಕ ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಆರೋಗ್ಯ ಸಚಿವಾಲಯವು 2022ರ ನೀಟ್ ಪರೀಕ್ಷೆಯ ದಿನಾಂಕವನ್ನು ಮುಂದೂಡಿದೆ. ಮಾ.12 ಕ್ಕೆ ನಿಗದಿಯಾಗಿದ್ದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗಳನ್ನು ಕೇಂಧ್ರ ಆರೋಗ್ಯ ಸಚಿವಾಲಯ ಇನ್ನೂ 6-8 ವಾರ ಮುಂದೂಡಲಾಗಿದೆ ಎಂದು ತಿಳಿಸಿದೆ.

ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಎಂಬಿಬಿಎಸ್ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದರ ಬೆನ್ನಲ್ಲೇ ಸರ್ಕಾರ ಪರೀಕ್ಷೆ ಮುಂದೂಡಲಾಗಿದೆ. ಇಂದು ನ್ಯಾಯಮೂರ್ತಿಗಳಾದ ಡಿ.ವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರ ಪೀಠ ಅರ್ಜಿ ವಿಚಾರಣೆ ನಡೆಸಲಿದೆ. ಕೋವಿಡ್ ಕಾರಣದಿಂದ ಕಡ್ಡಾಯ ಇಂಟರರ್ನ್‌ಶಿಪ್ ಪೂರೈಸದ ಕಾರಣ ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!