ಹೊಸದಿಗಂತ ವರದಿ ಹುಬ್ಬಳ್ಳಿ:
ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಧಾನಿ ಮೋದಿ ಅವರು ಮಾ. 19ರಂದು ರಾಜ್ಯದಲ್ಲಿ ಕೈಗೊಂಡಿರುವ ಪ್ರವಾಸ ಮುಂದುಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ಗುರುವಾರ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ರ್ಸ್ಪಸಲು ಮತ್ತೊಮ್ಮೆ ಅವಕಾಶ ಸಿಕ್ಕಿದ್ದರಿಂದ ಬೆಳಿಗ್ಗೆ ಆರಾಧ್ಯದೈವ ಸಿದ್ಧಾರೂಢ ಸ್ವಾಮಿ ಮಠಕ್ಕೆ ಭೇಟಿ ನೀಡಿ ಉಭಯ ಶ್ರೀಗಳ ದರ್ಶನ ಪಡೆದು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಲೋಕಸಭಾ ಚುನಾವಣೆಯಲ್ಲಿ ರ್ಸ್ಪಸಲು ಉಳಿದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆದಿರುವ ಹಿನ್ನೆಲೆ ಅವರ ಕಾರ್ಯಕ್ರಮ ಮುಂದೂಡಲಾಗಿದೆ. ಆಯ್ಕೆ ಬಳಿಕ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಸ್ಪಷ್ಟಪಡಿಸಿದರು.
ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ಪುತ್ರನಿಗೆ ಹಾವೇರಿ ಟಿಕೆಟ್ ಸಿಗದ ಕಾರಣಕ್ಕೆ ಬೇಜಾರಾಗಿದ್ದಾರೆ. ರಾಷ್ಟ್ರೀಯ ನಾಯಕರು ಇದನ್ನು ಸರಿ ಮಾಡುತ್ತಾರೆ ಎಂಬ ವಿಶ್ವಾಸವಿದೆ. ಟಿಕೆಟ್ ವಂಚಿತರು ಯಾರು ಬಂಡಾಯ ಎದ್ದೇಳುವುದಿಲ್ಲ ಎಂದು ತಿಳಿಸಿದರು.
ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಿಎಂ ಜಗದೀಶ ಶೆಟ್ಟರ ಹೆಸರು ಸಹ ಇದೆ. ಅವರ ಜೊತೆ ಬೇರೆ ಅವರ ಹೆಸರು ಇವೆ. ವರಿಷ್ಠರು ಮುಂದಿನ ದಿನಗಳಲ್ಲಿ ಹೆಸರು ಅಂತಿಮ ಮಾಡಲಿದ್ದಾರೆ.