ಹೊಸದಿಗಂತ ವರದಿ ಮಡಿಕೇರಿ:
ವೀರಾಜಪೇಟೆಯಲ್ಲಿ ಗೌರಿ- ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಅಲಂಕೃತ ಮಂಟಪಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ ಕಾಣಿಸಿಕೊಂಡಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಗಾಯಗೊಂಡವರಲ್ಲಿ ಬಸವರಾಜು ಎಂಬವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಮೂಲದ ಮತ್ತಿಬ್ಬರು ಗಾಯಾಳುಗಳನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:
ವಿಷಯ ತಿಳಿದು ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಎ.ಎಸ್. ಪೊನ್ನಣ್ಣ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.



