ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಇಂದು ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಬೆಸ್ಕಾಂ ವತಿಯಿಂದ ನಗರದ 66/11ಕೆ.ವಿ ಹೆಚ್‌ಬಿಆರ್ ಉಪವಿಭಾಗದಲ್ಲಿ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಗುರುವಾರ ಈ ಉಪವಿಭಾಗದ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಹೆಚ್‌ಬಿಆರ್ ಸುತ್ತಮುತ್ತ ಗುರುವಾರ ಬೆಳಗ್ಗೆ 10.30 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಹಾಗೂ ರೆಸಿಡೆನ್ಸಿ ರಸ್ತೆ ಸುತ್ತಮುತ್ತ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ. ಹೆಚ್‌ಬಿಆರ್ ಲೇಔಟ್, ಫಣಿಸಂದ್ರ ಸುತ್ತಮುತ್ತ ಹಾಗೂ ರೆಸಿಡೆನ್ಸಿ ರಸ್ತೆ, ಲ್ಯಾವೆಲ್ಲೆ ರಸ್ತೆ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕಿರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ಹೆಚ್.ಬಿ.ಆರ್. 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್‌ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀಚರ್ಸ್ ಕಾಲೊನಿ, ಹೆಚ್.ಬಿ.ಆರ್. 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ ಗ್ರಾಮ, ಸಿ.ಎಂ.ಆರ್.ರಸ್ತೆ, ರಶದ್‌ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ಲೇಔಟ್, ಸೆಂಟ್ರಲ್ ಎಕ್ಸೈಸ್, ಕೆ.ಕೆ. ಹಳ್ಳಿ, ಹೆಣ್ಣೂರು ಮುಖ್ಯರಸ್ತೆ, ಹೆಚ್.ಆರ್.ಬಿ.ಆರ್. 3ನೇ ಬ್ಲಾಕ್,ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್‌ಸ್ಟ್ರೀಟ್, ಎ.ಕೆ.ಕಾಲೋನಿ, ಹೆಚ್.ಆರ್.ಬಿ.ಆರ್. 1ನೇ ಬ್ಲಾಕ್, 80 ಅಡಿರಸ್ತೆ, ಹೆಚ್.ಬಿ.ಆರ್. ಲೇಔಟ್ 4ನೇ ಬ್ಲಾಕ್, ಯಾಸಿನ್‌ನಗರ, 5ನೇ ಬ್ಲಾಕ್, ಹೆಚ್.ಬಿ.ಆರ್. ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ. ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಹೆಚ್.ಕೆ.ಬಿ.ಕೆ ಕಾಲೇಜ್, 4ನೇ ಮತ್ತು 5ನೇ ಹೆಚ್.ಬಿ.ಆರ್. ಲೇ ಔಟ್, ವಿದ್ಯಾಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಸಿ.ಎಂ.ಆರ್. ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾರ್ಟರ್ಸ್, ಕೆಂಪೇಗೌಡ ಲೇಔಟ್, ಶಬರೀನಗರ, ಕೆ.ಎಂ.ಟಿ. ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ್ ಮಾತ ಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೊನಿ., ಬಿ.ಎಂ.ಆರ್.ಸಿ.ಎಲ್, ಗಾಂಧಿನಗರ, ಕುಶಾಲನಗರ, ಶಾಂಪುರ ಮೇನ್ ರೋಡ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.