ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, August 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವಿದ್ಯುತ್ ದರ ಏರಿಕೆ ಮಾಡಿರುವುದು ಖಂಡನೀಯ: ರಮಾನಾಥ ರೈ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಮಂಗಳೂರು:

ಇಂಧನ ದರ ಏರಿಕೆಯಾಗಿ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಿದೆ. ಇಂತಹ ಸಂದರ್ಭದಲ್ಲಿ ಸಕಾರಣವಿಲ್ಲದೆ ಸರಕಾರ ವಿದ್ಯುತ್ ದರ ಏರಿಕೆ ಮಾಡಿರುವುದು ಖಂಡನೀಯ. ತಕ್ಷಣ ಈ ನಿರ್ಧಾರವನ್ನು ಕೈ ಬಿಡಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆಗ್ರಹಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೋನಾ ಲಾಕ್‌ಡೌನ್, ಇಂಧನ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಸಂದರ್ಭದಲ್ಲೇ ವಿದ್ಯುತ್ ಬೆಲೆ ಏರಿಕೆ ಮೂಲಕ ಜನರ ಹಸಿವಿನ ಹೊಟ್ಟೆಗೆ ದೊಣ್ಣೆಯಿಂದ ಹೊಡೆದಂತಾಗಿದೆ ಎಂದವರು ಹೇಳಿದರು.
ಒಂದು ಅವಧಿಯಲ್ಲಿ ಕಾಂಗ್ರೆಸ್ ಸರಕಾರ ರೈತರ ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡಿದೆ. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಕೆಲವು ರಾಜ್ಯಗಳಲ್ಲಿ ಲಾಕ್‌ಡೌನ್ ಅವಧಿಯ ವಿದ್ಯುತ್ ಬಿಲ್ ಮನ್ನಾ ಮಾಡಲಾಗಿದೆ. ಆದರೆ ನಮ್ಮ ರಾಜ್ಯದಲ್ಲಿ ಒಂದು ವರ್ಷದ ಅವಧಿಯಲ್ಲಿ ಎರಡು ಬಾರಿ ವಿದ್ಯುತ್ ದರ ಏರಿಕೆ ಮಾಡಲಾಗಿದೆ ಎಂದು ಆಕ್ಷೇಪಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss