Wednesday, November 5, 2025

ಖರ್ಗೆಯಿಂದ ‘ಪವರ್ ಶೇರಿಂಗ್’ ಬ್ರೇಕ್! ಬಿಹಾರದತ್ತ ಸಿಎಂ-ಡಿಸಿಎಂ ಕಣ್ಣು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಕರ್ನಾಟಕದ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳ ಕುರಿತ ಕುತೂಹಲ ತೀವ್ರಗೊಂಡಿದೆ. ಅದರಲ್ಲೂ ಮುಖ್ಯವಾಗಿ ಅಧಿಕಾರ ಹಂಚಿಕೆ ಸಂಬಂಧದ ಗೊಂದಲದ ಮಧ್ಯೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಡಿಕೆಶಿ ದೆಹಲಿ, ಬಿಹಾರ ಪ್ರವಾಸ:

ಡಿಸಿಎಂ ಶಿವಕುಮಾರ್ ಅವರು ದೆಹಲಿಯಲ್ಲಿ ಇಂದಿನ ಕೆಲಸಗಳನ್ನು ಮುಗಿಸಿ, ನಾಳೆ (ದಿನಾಂಕ 6) ಬಿಹಾರಕ್ಕೆ ತೆರಳಲಿದ್ದಾರೆ. ಈ ವೇಳೆ ಅವರು ಎಐಸಿಸಿ ನಾಯಕರನ್ನು ಭೇಟಿ ಮಾಡುವ ಸಾಧ್ಯತೆ ಇದ್ದು, ಬಿಹಾರದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನೂ ಭೇಟಿ ಮಾಡಲಿದ್ದಾರೆ.

ಆದರೆ, ಈ ನಡುವೆ ಕಾಂಗ್ರೆಸ್‌ನ ಪ್ರಮುಖ ನಾಯಕರ ದೆಹಲಿ ಭೇಟಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ತಾತ್ಕಾಲಿಕವಾಗಿ ಬ್ರೇಕ್ ಹಾಕಿದ್ದಾರೆ. ಬಿಹಾರ ಚುನಾವಣೆಯ ಫಲಿತಾಂಶ ಹೊರಬೀಳುವವರೆಗೂ ಎಲ್ಲರೂ ಸಮಾಧಾನದಿಂದ ಕಾಯುವಂತೆ ಅವರು ಸೂಚಿಸಿದ್ದಾರೆ.

ಅಧಿಕಾರ ಹಂಚಿಕೆ ಗೊಂದಲಕ್ಕೆ ಸ್ಪಷ್ಟತೆ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 15 ರಂದು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆ. ಸಂಪುಟ ಪುನರ್ ರಚನೆಯ ಬಗ್ಗೆ ಚರ್ಚೆ ನಡೆದರೂ, ಈ ಭೇಟಿ ಪ್ರಮುಖವಾಗಿ ‘ಪವರ್ ಶೇರಿಂಗ್’ ಬಗ್ಗೆ ನಿರ್ಣಾಯಕ ಕ್ಲಾರಿಟಿ ನೀಡಲಿದೆ ಎನ್ನಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೂ ಹೈಕಮಾಂಡ್‌ನಿಂದ ಆಹ್ವಾನ ಬರುತ್ತದೆಯೇ ಎಂಬ ಕುತೂಹಲವೂ ಹೆಚ್ಚಾಗಿದೆ.

error: Content is protected !!