ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವಿದ್ಯುತ್ ಶಾಟ್೯ ಸರ್ಕ್ಯೂಟ್‌ನಿಂದ ಮನೆ ಬೆಂಕಿಗಾಹುತಿ

ಹೊಸ ದಿಗಂತ ವರದಿ, ಮಡಿಕೇರಿ:

ವಿದ್ಯುತ್ ಶಾಟ್೯ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಮನೆಯೊಂದು ಸಂಪೂರ್ಣ ಸುಟ್ಟು ಹೋದ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ.
ಮರಗೋಡು ನಿವಾಸಿ ಕಾನಡ್ಕ ಉತ್ತಪ್ಪ ಎಂಬವರ ಮನೆಯೇ ಬೆಂಕಿಗೆ ಆಹುತಿಯಾಗಿದ್ದು, ಅಂದಾಜು 5 ಲಕ್ಷ ರೂ. ನಷ್ಟ ಸಂಭವಿಸಿದೆ.
ಮನೆ ಮಂದಿ ಕೆಲಸಕ್ಕೆ ತೆರಳಿದ್ದ ಸಂದರ್ಭ ಈ ಘಟನೆ ನಡೆದಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ. ಆದರೆ ಮನೆಯಲ್ಲಿದ್ದ ಗೃಹೋಪಯೋಗಿ ಹಾಗೂ ದಿನ ಬಳಕೆಯ ವಸ್ತುಗಳು ಸಂಪೂರ್ಣವಾಗಿ ಬೆಂಕಿಯ ಜ್ವಾಲೆಗೆ ಭಸ್ಮವಾಗಿದೆ. ಈ ಘಟನೆ ಬಗ್ಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss