ಯೋಜನೆಗಳಿಂದ ದೇಶದ ಆರ್ಥಿಕತೆಗೆ ಬಲ: ಸಿಎಂ ಬೊಮ್ಮಾಯಿ

ಹೊಸದಿಗಂತ ವರದಿ,ಮಂಗಳೂರು:

ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಶುಕ್ರವಾರ ಮಂಗಳೂರಿನಲ್ಲಿ ಬಂದರು, ಒಳನಾಡು ಜಲ ಸಾರಿಗೆ ಮತ್ತು ಎಂ ಆರ್ ಪಿ ಎಲ್ ಸಂಬಂಧಿಸಿದ ರೂ.3,800 ಕೋಟಿಗಳ ಎಂಟು ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ ಮತ್ತು ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದಲ್ಲಿ ಅಭಿವೃದ್ಧಿಯ ಶಕೆ ಆರಂಭವಾಗಿದೆ. ರೂ.3,800 ಕೋಟಿಯ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸದಿಂದ ಕರಾವಳಿಯ ಅಭಿವೃದ್ಧಿಗೆ ವೇಗ ಸಿಗಲಿದೆ ಎಂದರು.
ಯೋಜನೆಗಳಿಂದಾಗಿ ನವ ಮಂಗಳೂರು ಬಂದರು ಪ್ರಾಧಿಕಾರದ ವಾರ್ಷಿಕ ವಹಿವಾಟು ನಾಲ್ಕು ಪಟ್ಟು ಹೆಚ್ಚಾಗಲಿದೆ. ಇದು ದೇಶದ ಆರ್ಥಿಕತೆಗೆ ಬಲ ತುಂಬಲಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ, ಬಂದರು, ಹಡಗು ಮತ್ತು ಜಲಸಾರಿಗೆ ಹಾಗೂ ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ, ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್, ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ರಾಜ್ಯದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಸುನೀಲ್ ಕುಮಾರ್, ಸಂಸತ್ ಸದಸ್ಯ ನಳಿನ್ ಕುಮಾರ್, ಜಿಲ್ಲೆಯ ಶಾಸಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!