ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದಲ್ಲಿ ಬಲವಾದ ಭೂಕಂಪ ಸಂಭವಿಸಿದೆ. ಶುಕ್ರವಾರ ಡ್ರೇಕ್ ಪ್ಯಾಸೇಜ್ ಪ್ರದೇಶದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಇದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 7.5 ರಷ್ಟು ದಾಖಲಾಗಿದೆ. ಭೂಕಂಪದ ನಂತರ ಸುನಾಮಿಯ ಭಯ ಆವರಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಪ್ರಕಾರ, ಈ ಭೂಕಂಪವು ಭಾರತೀಯ ಸಮಯ 07.46 ಕ್ಕೆ ಸಂಭವಿಸಿದೆ. ಇದರ ಕೇಂದ್ರಬಿಂದು ಡ್ರೇಕ್ ಪ್ಯಾಸೇಜ್‌ನಲ್ಲಿದೆ.
ಡ್ರೇಕ್ ಪ್ಯಾಸೇಜ್ ದಕ್ಷಿಣ ಅಮೆರಿಕ ಮತ್ತು ಅಂಟಾರ್ಕ್ಟಿಕಾ ನಡುವೆ ಇದೆ. ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆಯ ಆರಂಭಿಕ ವರದಿಗಳು ಭೂಕಂಪದ ತೀವ್ರತೆಯನ್ನು 8.0 ಎಂದು ಹೇಳಿದ್ದವು. ದಕ್ಷಿಣ ಅಮೆರಿಕ ಮತ್ತು ಅಂಟಾರ್ಕ್ಟಿಕ್ ಟೆಕ್ಟೋನಿಕ್ ಪ್ಲೇಟ್‌ಗಳ ಜಂಕ್ಷನ್‌ನಲ್ಲಿ ಈ ಪ್ರದೇಶ ಇರುವುದರಿಂದ ಕಂಪನಗಳು ಹೆಚ್ಚಿವೆ.
ಭೂಕಂಪದ ನಂತರ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಆದಾಗ್ಯೂ, ಯಾವುದೇ ದೊಡ್ಡ ಹಾನಿ ಸಂಭವಿಸಿದ ಬಗ್ಗೆ ಇನ್ನೂ ವರದಿಯಾಗಿಲ್ಲ.ಇದು ಪೂರ್ವದಲ್ಲಿ ಅಟ್ಲಾಂಟಿಕ್ ಸಾಗರವನ್ನು ಪಶ್ಚಿಮದಲ್ಲಿ ಪೆಸಿಫಿಕ್ ಮಹಾಸಾಗರಕ್ಕೆ ಸಂಪರ್ಕಿಸುತ್ತದೆ. ಡ್ರೇಕ್ ಪ್ಯಾಸೇಜ್‌ನ ಅಗಲ ಕನಿಷ್ಠ 800 ಕಿ.ಮೀ. ಇದೆ.