ಮ್ಯಾನ್ಮಾರ್, ಥೈಲ್ಯಾಂಡ್‌ನಲ್ಲಿ ಪ್ರಬಲ ಭೂಕಂಪನ: 144 ಮಂದಿ ಸಾವು, 700ಕ್ಕೂ ಹೆಚ್ಚು ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪನವು ಕಟ್ಟಡಗಳು, ಸೇತುವೆ ಮತ್ತು ಅಣೆಕಟ್ಟುಗಳು ನಾಶಗೊಂಡಿವೆ. ಮ್ಯಾನ್ಮಾರ್‌ನಲ್ಲಿ ಕನಿಷ್ಠ 144 ಮಂದಿ ಸಾವನ್ನಪ್ಪಿದ್ದು 732 ಅಧಿಕ ಜನರು ಗಾಯಗೊಂಡಿದ್ದಾರೆ.

ಥಾಯ್ ರಾಜಧಾನಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಬಹುಮಹಡಿ ಕಟ್ಟಡ ಕುಸಿದು ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಮ್ಯಾನ್ಮಾರ್‌ನ ಎರಡನೇ ಅತಿದೊಡ್ಡ ನಗರವಾದ ಮಂಡಲೆ ಬಳಿ ಕೇಂದ್ರಬಿಂದುವಾಗಿದ್ದ 7.7 ತೀವ್ರತೆಯ ಭೂಕಂಪವು ಮಧ್ಯಾಹ್ನ ಅಪ್ಪಳಿಸಿತು ಮತ್ತು ನಂತರ 6.4 ತೀವ್ರತೆಯ ಪ್ರಬಲವಾದ ನಂತರದ ಕಂಪನ ಸಂಭವಿಸಿತು.

ವಿಶ್ವದ ಅತ್ಯಂತ ಬಡ ದೇಶಗಳಲ್ಲಿ ಒಂದಾದ ಮ್ಯಾನ್ಮಾರ್‌ನಲ್ಲಿ, ವಿಶೇಷವಾಗಿ ಸಾವುನೋವು, ಗಾಯ ಮತ್ತು ವಿನಾಶದ ಪೂರ್ಣ ಪ್ರಮಾಣವು ತಕ್ಷಣವೇ ಸ್ಪಷ್ಟವಾಗಿಲ್ಲ. ಆದರೆ ಇಲ್ಲಿಯವರೆಗೂ 144 ಜನರು ಸಾವನ್ನಪ್ಪಿದ್ದು 732 ಜನರು ಗಾಯಗೊಂಡಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ. ಅಲ್ಲದೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ನೇ ಪೈ ಟಾವ್‌ನಲ್ಲಿ 96 ಮಂದಿ, ಸಾಗೈಂಗ್‌ನಲ್ಲಿ 18 ಮಂದಿ ಮತ್ತು ಮಂಡಲೆಯಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಮಾಹಿತಿ ನೀಡಿದ್ದು ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್ನು ಭೂಕಂಪದ ಪರಿಣಾಮವಾಗಿ ಥಾಯ್ ಪ್ರಧಾನಿ ಪೇಟೊಂಗ್ಟಾರ್ನ್ ಶಿನವಾತ್ರಾ ಬ್ಯಾಂಕಾಕ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಮೆಟ್ರೋ ಮತ್ತು ಲಘು ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!