ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ: ಏಳು ಸಾವು, 10 ಸಾವಿರ ಮನೆಗಳು ನೆಲಸಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಸುಮಾತ್ರಾ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ.
ಭೂಕಂಪದಲ್ಲಿ 10 ಸಾವಿರಕ್ಕೂ ಹೆಚ್ಚು ಕಟ್ಟಡಗಳು ನೆಲಸಮವಾಗಿವೆ.
ಇಂಡೋನೇಷ್ಯಾದ ಪಸಮನ ಬರಾತ್ ಜಿಲ್ಲೆಯ ಈಶಾನ್ಯಕ್ಕೆ 17 ಕಿ.ಮೀ ದೂರದಲ್ಲಿ, ಭೂಮಿಯ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.2 ರಷ್ಟು ದಾಖಲಾಗಿದ್ದು, 85 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಐದು ಸಾವಿರಕ್ಕೂ ಹೆಚ್ಚು ಮಂದಿ ಭಯಕ್ಕೆ ಮನೆ ತೊರೆದಿದ್ದು, ನಿರಾಶ್ರಿತರ ಶಿಬಿರದಲ್ಲಿ ಆಶ್ರಯ ಪಡೆದಿದ್ದಾರೆ.
ಪೊಲೀಸರು, ವಿಪತ್ತು ಏಜೆನ್ಸಿ ಸಿಬ್ಬಂದಿ, ಸೈನಿಕರು, ಸ್ವಯಂಸೇವಕರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ನಾಪತ್ತೆಯಾದವರ ಶೋಧ ಕಾರ್ಯ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!