ಹೊಸದಿಗಂತ ಡಿಜಿಟಲ್ ಡೆಸ್ಕ್:
ಮ್ಯಾನ್ಮಾರ್‌ನಲ್ಲಿಂದು ಸಂಭವಿಸಿದ ಭೀಕರ ಭೂಕಂಪಕ್ಕೆ ಹಲವೆಡೆ ಕಟ್ಟಡಗಳು ನೆಲಸಮವಾಗಿದೆ. ಅಲ್ಲದೇ 43 ಕಾರ್ಮಿಕರು ನಾಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿದೆ.
ಇಂದು ಬೆಳಗ್ಗೆ 11:50ರ ಸುಮಾರಿಗೆ 7.7 ತೀವ್ರಯ ಭೂಕಂಪ ಸಂಭವಿಸಿದೆ, ಮಧ್ಯಾಹ್ನ 12:50ರ ಸುಮಾರಿಗೆ 6.8 ತೀವ್ರತೆಯಲ್ಲಿ ಮತ್ತೊಂದು ಬಾರಿ ಭೂಕಂಪ ಸಂಭವಿಸಿದೆ. ಭೂಮಿಯ 10 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಯಾವುದೇ ಸಾವು ನೋವುಗಳ ವರದಿಯಾಗಿಲ್ಲ.
ಬ್ಯಾಂಕಾಕ್ ಹಾಗೂ ಥೈಲ್ಯಾಂಡ್‌ನಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ. ಕಟ್ಟಡಗಳು ಅಲುಗಾಡಿವೆ, ಕೆಲವಡೆ ಮುಗಿಲೆತ್ತರದ ಕಟ್ಟಗಳು ಧ್ವಂಸವಾದ ದೃಶ್ಯಗಳು ಸೆರೆಯಾಗಿವೆ.
#WATCH A strong #earthquake of magnitude 7.9 jolted in #Myanmar and surrounding areas, with strong tremors felt in #Bangkok.
Severe shaking caused water to gush out of a rooftop swimming pool at a hotel in #Thailand.#MyanmarEarthquake #BangkokEarthquake #ThailandEarthquake pic.twitter.com/P58bpEMfH0
— Bangla Pulse (@pulse_bangla) March 28, 2025