Sunday, June 26, 2022

Latest Posts

ಗುಜರಾತ್‌ ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಪ್ರಬಲ ಸ್ಫೋಟ: 7 ಕಾರ್ಮಿಕರು ಅಸ್ವಸ್ಥ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಗುಜರಾತ್‌ನ ವಡೋದರಾ ನಗರದ ಹೊರವಲಯದಲ್ಲಿರುವ ನಂದೇಸರಿ ಕೈಗಾರಿಕಾ ಪ್ರದೇಶದಲ್ಲಿನ ರಾಸಾಯನಿಕ ಕಾರ್ಖಾನೆಯಲ್ಲಿ ಗುರುವಾರ ಪ್ರಬಲ ಸ್ಫೋಟ ಸಂಭವಿಸಿದ್ದು 7 ಕಾರ್ಮಿಕರು ಅಸ್ವಸ್ಥರಾಗಿದ್ದಾರೆ.

ದೀಪಕ್ ನೈಟ್ರೈಟ್‌ನ ರಾಸಾಯನಿಕ ಉತ್ಪಾದನಾ ಘಟಕದಲ್ಲಿ ಈ ಸ್ಫೋಟ ಸಂಭವಿಸಿದ್ದು ಸ್ಫೋಟದ ಹೊಗೆ ಸೇವಿಸಿ ಏಳು ಜನ ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು ಕಾರ್ಖಾನೆಯ ಸುತ್ತಮುತ್ತಲಿನ ಸುಮಾರು 700 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಸ್ಫೋಟದ ನಂತರ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿಗೆ ಕಾರಣವೇನೆಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಹತ್ತಕ್ಕೂ ಹೆಚ್ಚಿನ ಅಗ್ನಿಶಾಮಕ ವಾಹನಗಳು ಧಾವಿಸಿದ್ದು ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ ಎಂದು ಮೂಲಗಳು ವರದಿ ಮಾಡಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss